ಬಿಜೆಪಿಗೆ ರಾಜಿನಾಮೆ
ಗುಲ್ಬರ್ಗ/ಶಹಾಬಾದ್: ಶಹಾಬಾದ್ ನಗರ ಬಿಜೆಪಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅನ್ವರ್ ಪಾಶಾ ನಶೀರುದ್ದೀನ್ ಅವರು ತಮ್ಮ ಅಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಈ ಬಗ್ಗೆ ನಗರ ಅಧ್ಯಕ್ಷರಿಗೆ ರಾಜಿನಾಮೆ ಪತ್ರ ನೀಡಿದ್ದು, ತಮ್ಮ ವೈಯಕ್ತಿಕ, ಅಂತರಿಕ ಕಾರಣಗಳಿಂದ ಪಕ್ಷಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಕಳೆದ ನಗರಸಭೆ, ವಿಧಾನಸಭೆ ಚುನಾವಣೆಯಲ್ಲಿ ಸ್ಥಳೀಯವಾಗಿ ಪಕ್ಷದ ನಾಯಕರ ಧೋರಣೆ, ಕಾರ್ಯಕರ್ತರೊಂದಿಗೆ ನಾಯಕರ ವರ್ತನೆಗೆ ಬೇಸತ್ತು ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ. ಇವರ ರಾಜಿನಾಮೆಯಿಂದ ಪಕ್ಷದಲ್ಲಿ ಅಲ್ಪಸಂಖ್ಯಾತರು ಇಲ್ಲದಂತಾಗಿದೆ.