ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಮೀಸಲಾತಿ ಪಟ್ಟಿಯಿಂದ ತೆಗೆಯಲು ಅಗ್ರಹ

Lingaraj Badiger
Updated On : 25 May 2013, 11:21 am

ಗುಲ್ಬರ್ಗ: ಸ್ಪರ್ಶ ಜಾತಿಗಳಾದ ಲಂಬಾಣಿ, ಭೋವಿ ಮತ್ತು ಕೊರವ ಜನಾಂಗವನ್ನು ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಿಂದ ತೆಗೆದು ಹಾಕಬೇಕೆಂದು ಆರ್ಪಿಐ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಶಿವರಾಮ ಮೋಘಾ ಒತ್ತಾಯಿಸಿದ್ದಾರೆ.
  ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದಲ್ಲಿ ಸ್ಪರ್ಶ ಜಾತಿಗಳನ್ನು ಎಸ್ಟಿ ಮೀಸಲಾತಿ ಅಡಿ ಸೇರಿಸಲಾಗಿದೆ. ಅದೇ ತರಹ ರಾಜ್ಯದಲ್ಲಿಯೂ ಸೇರಿಸುವುದಕ್ಕೆ ಸರ್ಕಾರ ಮುಂದಾಗಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನ್ಯಾ. ಸದಾಶಿವ ವರದಿ ಜಾರಿಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ ಮೋಘಾ ಅದು ಜಾರಿಯಾದರೆ ಲಂಬಾಣಿ ಭೋವಿ ಹಾಗೂ ಇತರ ಸ್ಪರ್ಶ ಜನಾಂಗಕ್ಕೆ  ಮೀಸಲಾತಿ ನೀಡಬೇಕಾಗುತ್ತದೆ ಎಂದರು.  ಶಾಸಕ ಪ್ರಿಯಾಂಕ್ ಖರ್ಗೆ ಮತ್ತು ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ರೋಶ ತಮಗಿಲ್ಲ ಎಂದು ಸ್ಪಷ್ಟಪಡಿಸಿದರು.  ಖರ್ಗೆ ಅವರನ್ನು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಮಾಡಬೇಕು ಎಂದು ಮನವಿ ಮಾಡಿದರು.

ಕರಡಕಲ್; ಇಂದು ಶಿವಾನುಭವ ಗೋಷ್ಠಿ
ಯಾದಗಿರಿ: ಸುರಪುರ ತಾಲೂಕಿನ ಕರಡಕಲ್ ಗ್ರಾಮದ ಕೋರಿ ಸಿದ್ದೇಶ್ವರ ಮಠದಲ್ಲಿ 151ನೇ ಶಿವಾನುಭವ ಗೋಷ್ಠಿ ಹಾಗೂ ಕೋರಿ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಭಿತ್ತಿಪತ್ರ ಬಿಡುಗಡೆ ಸಮಾರಂಭ ಮೇ 25ರಂದು ರಾತ್ರಿ 8 ಗಂಟೆಗೆ ನಡೆಯಲಿದೆ. ಶ್ರೀಮಠದ ಶಾಂತರುದ್ರಮುನಿ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಮುದನೂರದ ಮಲ್ಲಿಕಾರ್ಜುನ ದೇವರು ನೇತೃತ್ವ ವಹಿಸಲಿದ್ದಾರೆ. ಕರವೇ ರಾಜ್ಯ ಸಂಚಾಲಕ ಎಂ. ಬಸವರಾಜ ಪಡುಕೋಟೆ ಉದ್ಘಾಟಿಸಲಿದ್ದಾರೆ ಎಂದು ಶ್ರೀಮಠದ ವಕ್ತಾರ ಶಿವಪ್ರಕಾಶ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement