ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸಿಡಿಲಿಗೆ ವ್ಯಕ್ತಿ ಬಲಿ

Lingaraj Badiger
Updated On : 30 May 2013, 11:21 am

ಯಾದಗಿರಿ: ಹೊಸದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೊಟಗೇರಾದಲ್ಲಿ ಬುಧವಾರ ಸಂಭವಿಸಿದೆ. ಶ್ರೀಮಂತ(55) ಮೃತನು. ಹೊಲದಲ್ಲಿ ನೇಗಿಲು ಹೊಡೆಯುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಕ್ಕಿ: ಬಾಲಕ ಸಾವು
ಯಾದಗಿರಿ: ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಬಾಲಕನ ಮೇಲೆ ಟ್ರ್ಯಾಕ್ಟರ್ ಹಾಯ್ದು ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಳಿಚಕ್ರ ಗ್ರಾಮದಲ್ಲಿ ಬುಧವಾರ ನಡೆದಿದೆ. ಪರಶುರಾಮ(7) ಮೃತ ಬಾಲಕ. ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜು: 8 ಬಂಧನ
ಸುರಪುರ: ಸಮೀಪದ ವೆಂಕಾಟಪುರ ಹತ್ತಿರದ ಪೆಟ್ರೋಲ್ ಬಂಕ್ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ 8 ಜನರನ್ನು ಬಂಧಿಸಿ ಅವರಿಂದ 1.90 ಲಕ್ಷ ನಗದು ವಶಕ್ಕೆ ತೆಗೆದುಕೊಂಡು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಇಸ್ಪೀಟ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಪಿಐ ರಾಜಕುಮಾರ ವಾಜಂತ್ರಿ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. 8 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ ನಗದು ವಶಪಡಿಸಿಕೊಂಡಿದ್ದಾರೆ. ಪಿಎಸ್ಐ ಹಣಮಂತಪ್ಪ ಪಟ್ಟೇದಾರ್, ಪೇದೆಗಳಾದ ರಾಮಲು, ಬಸವರಾಜ, ಪ್ರಭುಗೌಡ, ಬಸವರಾಜ ನಾಯಕ, ಹುಲಗಪ್ಪ ಇತರರು ದಾಳಿಯಲ್ಲಿ ಭಾಗವಹಿಸಿದ್ದರು. ಸುರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement