ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಧರಣಿ ಸ್ಥಳಕ್ಕೆ ಸಚಿವ, ಶಾಸಕರ ಭೇಟಿ

Lingaraj Badiger
Updated On : 11 Nov 2013, 11:34 am

ಗುಲ್ಬರ್ಗ: ಜೆಸ್ಕಾಂನ ಗ್ರಾಮೀಣ ವಿದ್ಯುತ್ ಪ್ರತಿನಿಧಿಗಳು ಗುಲ್ಬರ್ಗದ ಜೆಸ್ಕಾಂ ಮುಖ್ಯ ಕಚೇರಿ ಎದುರು ನಡೆಸುತ್ತಿರುವ 4ನೇ ದಿನ ಹೋರಾಟದ ಸ್ಥಳಕ್ಕೆ ಗುಲ್ಬರ್ಗ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ, ಆಳಂದ ಶಾಸಕ ಬಿ.ಆರ್. ಪಾಟೀಲ್, ಗುಲ್ಬರ್ಗ ಗ್ರಾಮೀಣ ಕ್ಷೇತ್ರದ ಶಾಸಕ ಜಿ. ರಾಮಕೃಷ್ಣ ಭೇಟಿ ನೀಡಿದರು.
  ಜೆಸ್ಕಾಂ ವ್ಯಾಪ್ತಿಯ 6 ಜಿಲ್ಲೆಗಳ ಗ್ರಾಮ ವಿದ್ಯುತ್ ಪ್ರತಿನಿಧಿಗಳು ನಡೆಸುತ್ತಿರುವ ಹೋರಾಟ 4ನೇ ದಿವಸಕ್ಕೆ ಕಾಲಿಟ್ಟಿದ್ದು, ಸರ್ಕಾರದ ಗಮನ ಸೆಳೆಯಲು ಶನಿವಾರ ಕಪ್ಪುಪಟ್ಟಿ ಧರಿಸಿ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ, ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.
  ಧರಣಿ ಸ್ಥಳಕ್ಕೆ ಭೇಟಿ ನೀಡಿದ ಗುಲ್ಬರ್ಗ ಉಸ್ತುವಾರಿ ಸಚಿವರು, ಈ ಬಗ್ಗೆ ಬಹು ಬೇಗ ಇಂಧನ ಖಾತೆ ಹೊಂದಿರುವ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಎಲ್ಲ ಅಧಿಕಾರಿಗಳ ಗಮನಕ್ಕೆ ತಂದು ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಿಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹೋರಾಟದ ರೂವಾರಿ ಚಂದ್ರಶೇಖರ ಹಿರೇಮಠ, ಪ್ರಭು, ಸಂಗಮೇಶ, ಶಿವಕುಮಾರ್, ರೇವಣಸಿದ್ದಯ್ಯ ಶಾಸ್ತ್ರೀ, ಗುರುರಾಜ, ಮಂಜುನಾಥ, ಖಂಡಪ್ಪ, ಈರಣ್ಣ ನೂರಾರು ಪ್ರತಿನಿಧಿಗಳು ಇದ್ದರು.
--
ನಾಳೆ ಥ್ರೋಬಾಲ್ ಪಂದ್ಯಾವಳಿ ಉದ್ಘಾಟನೆ
ಗುಲ್ಬರ್ಗ: ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಗುಲ್ಬರ್ಗ ಮತ್ತು ಮಿಲಿಂದ ಪದವಿಪೂರ್ವ ಕಾಲೇಜುಗಳ ಆಶ್ರಯದಲ್ಲಿ ನ.12ರಂದು ಬೆಳಗ್ಗೆ 10 ಗಂಟೆಗೆ ನಗರದ ನೂತನ ವಿದ್ಯಾಲಯ ಸಂಸ್ಥೆಯ ಆಟದ ಮೈದಾನದಲ್ಲಿ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಥ್ರೋಬಾಲ್ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ.
  ಕೆಪಿಇ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಾರುತಿರಾವ್ ಡಿ. ಮಾಲೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೂತನ ವಿದ್ಯಾಲಯ ಸಂಸ್ಥೆ ಕಾರ್ಯದರ್ಶಿ ಶಾಮರಾವ್ ಖಣಗೆ, ಕ್ರೀಡಾ ಸಮಿತಿ ಅಧ್ಯಕ್ಷ ಡಾ. ಗೌತಮ ಆರ್. ಜಹಾಗೀರದಾರ, ಗುಲ್ಬರ್ಗ ವಿಶ್ವವಿದ್ಯಾಲಯದ ಡಾ. ದಯಾನಂದ, ಪದವಿಪೂರ್ವ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ಎ.ಎಚ್. ಎಲಿಮನಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಂ. ಸಾಳುಂಕೆ ಅಧ್ಯಕ್ಷತೆ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement