ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಅನಾಥ ಮಕ್ಕಳಿಗೆ ವಿಶೇಷ ಮೀಸಲಾತಿ ನೀಡಲು ಒತ್ತಾಯ

Rashmi Kasaragodu
Updated On : 13 Nov 2013, 11:56 am

ಗುಲ್ಬರ್ಗ: ತಂದೆ- ತಾಯಿ ಇಲ್ಲದೆ ಎಲ್ಲೋ ಬೆಳೆದ ಅನಾಥ ಮಕ್ಕಳಿಗೆ ಸಾಮಾನ್ಯ ಪಟ್ಟಿಯಲ್ಲಿ ಸೇರಿಸಿರುವುದರಿಂದ ಸರ್ಕಾರದ ಮೀಸಲು ಸೌಲಭ್ಯದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿರುವ ಎಲ್ಲ ಅನಾಥ ಮಕ್ಕಳಿಗೆ ಪ್ರತ್ಯೇಕ (ವಿಶೇಷ) ಮೀಸಲಾತಿ ನೀಡಬೇಕೆಂದು ಪಂಚ ಜಿಲ್ಲೆ ಜನಪರ ಹೋರಾಟ ಸಮಿತಿ ಆಗ್ರಹಿಸಿದೆ.
ಆಶ್ರಮದಲ್ಲಿ ಮಕ್ಕಳಿಗೆ ಊಟ, ಬಟ್ಟೆ, ಶಿಕ್ಷಣ ಸಿಗುತ್ತದೆ. ಉನ್ನತ ಶಿಕ್ಷಣ ಕೊಡಿಸುವುದು ಆಶ್ರಮಗಳಿಗೆ ಕಷ್ಟದ ಕೆಲಸ. ಇದರಿಂದ ಉನ್ನತ ಶಿಕ್ಷಣಕ್ಕೆ ಸರ್ಕಾರಿ ಸೇವೆಯಿಂದ ಈ ಮಕ್ಕಳು ವಂಚಿತರಾಗಿರುತ್ತಾರೆ. ಇದನ್ನು ತಡೆಗಟ್ಟಲು ಸರ್ಕಾರ ಮಕ್ಕಳಿಗೆ ನೆರವಿಗೆ ನಿಲ್ಲಬೇಕು. ಖಾಸಗಿ ಶಾಲಾ ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು.
ಶಾಲಾ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ಶುಲ್ಕ ಪಡೆಯಲಾಗುತ್ತದೆ. ಇದನ್ನು ತಡೆಗಟ್ಟಿ ಯಾವುದೇ ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಬಯಸುವ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ವ್ಯವಸ್ಥೆ ಕಲ್ಪಿಸಬೇಕು. ತಂದೆ- ತಾಯಿಯ ಪ್ರೀತಿಯಿಂದ ವಂಚಿತರಾದ ಈ ಮಕ್ಕಳ ನೆರವಿಗೆ ಸರ್ಕಾರ ಬರದಿದ್ದರೆ ಮಕ್ಕಳ ಭವಿಷ್ಯ ಮಂಕಾಗುತ್ತದೆ. ಆದ್ದರಿಂದ ಅನಾಥ ಮಕ್ಕಳ ಉನ್ನತ ಶಿಕ್ಷಣಕ್ಕೆ ಮುಂದಾಗಬೇಕೆಂದು ಪಂಚಜಿಲ್ಲಾ ಜನಪರ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement