ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸಿಎಂ ಆಗಮನ: ಹೆಲಿಪ್ಯಾಡ್ ಸ್ಥಳ ಪರಿಶೀಲನೆ

Mainashree
Updated On : 15 Nov 2013, 12:47 pm

ಗುರುಮಠಕಲ್: ಯಾದಗಿರಿ ತಾಲೂಕಿನ ಗುರುಮಠಕಲ್ ಪಟ್ಟಣಕ್ಕೆ ನವೆಂಬರ್ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಭೀಮಾ ನದಿಯ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟನೆ ನೆರವೇರಿಸಲಿದ್ದಾರೆ.
  ಹೆಲಿಕ್ಯಾಪ್ಟರ್ ಮೂಲಕ ಗುರುಮಠಕಲಗೆ ಆಗಮಿಸಲಿದ್ದು, ಗುರುಮಠಕಲ್ ಪಟ್ಟಣದ ಎಪಿಎಂಸಿ ಆವರಣದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡ್ ಮಾಡುವುದರ ಕುರಿತು  ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣಾ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು, ಪ.ಪಂ. ಮುಖ್ಯಾಧಿಕಾರಿ ರವೀಂದ್ರ ವೈ. ಲಂಬು, ವಿಶೇಷ ತಹಸೀಲ್ದಾರ್ ಎಜಾಜ್ ಉಲ್ ಹಕ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement