ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ರಾಜಾ ವೆಂಕಟಪ್ಪ ನಾಯಕ

Rashmi Kasaragodu
Updated On : 16 Nov 2013, 11:47 am

ಸುರಪುರ: ಅಧಿಕಾರ ಇದ್ದಾಗ ಮತ್ತು ಇರದಿದ್ದಾಗ ಗ್ರಾಮದ ಜನತೆ ನನ್ನ ಕೈ ಬಿಟ್ಟಿಲ್ಲ. ಹೀಗಾಗಿ ಈ ಗ್ರಾಮದ ಮೇಲೆ ನನಗೆ ಅತ್ಯಂತ ಪ್ರೀತಿ. ಈ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ತಾವು ಬದ್ಧ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಭರವಸೆ ನೀಡಿದರು.
ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಗ್ರಾಮಸ್ಥರಿಂದ ನಾಗರಿಕ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ಹಿಂದೆ ನಾನು ಶಾಸಕನಾಗಿದ್ದಾಗ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ. ಮತ್ತೆ ನಿಮ್ಮ ಸೇವೆ ಮಾಡುವ ಭಾಗ್ಯ ಒದಗಿಸಿ ಕೊಟ್ಟಿದ್ದೀರಿ. ಈ ಬಾರಿ ಬಾಕಿ ಇರುವ ಕೆಲಸಗಳನ್ನು ಮಾಡಿಕೊಟ್ಟು ಋಣ ಮುಕ್ತನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಕುಡಿಯುವ ನೀರು, ಬಿಸಿಎಂ ವಸತಿ ನಿಲಯ, ಸಮುದಾಯ ಭವನ ಸೇರಿದಂತೆ ಗ್ರಾಮಸ್ಥರ ಇತರೆ ಬೇಡಿಕೆಗಳಿಗೆ ಸ್ಪಂದಿಸಿದ ಶಾಸಕರು ನಾನು ಮಾತು ಕೊಡುವುದಿಲ್ಲ, ಕೆಲಸ ಮಾಡಿ ತೋರಿಸುತ್ತೇನೆ. ಈ ಬಾರಿ ಸುರ್ವರ್ಣ ಗ್ರಾಮ ಯೋಜನೆಯಲ್ಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಗ್ರಾಮದ ಬಗ್ಗೆ ನಿಮಗಿಂತ ಹೆಚ್ಚಿನ ಕಳಕಳಿ ನನಗಿದೆ. ಈ ಗ್ರಾಮಕ್ಕೆ ಏನು ಅವಶ್ಯಕತೆ ಇದೆ ಎನ್ನುವುದು ನನ್ನ ಗಮನದಲ್ಲಿದೆ. ಈ ಎಲ್ಲಾ ಬೇಡಿಕೆಗಳನ್ನು ಹಂತಹಂತವಾಗಿ ನೆರವೇರಿಸುವುದಾಗಿ ಭರವಸೆ ನೀಡಿದರು. ಬೇಡಿಕೆಗಳ ಪತ್ರವನ್ನು ಗ್ರಾಮದ ಮುಖಂಡ ಮಲ್ಲನಗೌಡ ಪಾಟೀಲ ಸಲ್ಲಿಸಿದರು. ತಾಪಂ ಅಧ್ಯಕ್ಷ ಶ್ರೀನಿವಾಸ ಪಾಟೀಲ್, ಸೂಲಪ್ಪ ಕಮತಗಿ, ಸಣ್ಣ ದೇಸಾಯಿ, ಮಲ್ಲಣಗೌಡ ದೇವಿಕೇರಿ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement