ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

20ರಂದು ಅದ್ಧೂರಿ ಕನಕ ಜಯಂತಿ

Mainashree
Updated On : 18 Nov 2013, 11:12 am

ಜೇವರ್ಗಿ:  ತಾಲೂಕು ಆಡಳಿತ ನ.20ರಂದು ಹಮ್ಮಿಕೊಂಡಿರುವ ಕನಕ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಾಲೂಕು ಕುರುಬ ಸಮಾಜದ ಅಧ್ಯಕ್ಷ ನಿಂಗಣ್ಣ ಭಂಡಾರಿ ತಿಳಿಸಿದ್ದಾರೆ. ಈ ಕುರಿತು ಕುರುಬ ಸಮಾಜ ಜಯಂತ್ಯುತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಹುತೇಕ ಸಂಘ ಸಂಸ್ಥೆಗಳು, ಸಮುದಾಯಗಳ ಸಹಮತದೊಂದಿಗೆ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ನಂತರ ತಹಸೀಲ್ ಆವರಣದಲ್ಲಿ 11.30 ಗಂಟೆಗೆ ಜಯಂತ್ಯುತ್ಸವ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾಲೂಕು ಅಧ್ಯಕ್ಷ ನಿಂಗಣ್ಣ ಭಂಡಾರಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement