ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸುದ್ದಿ ಸಂಕ್ಷೇಪ

Mainashree
Updated On : 20 Nov 2013, 10:58 am

ಚೌಡಯ್ಯ ಜಯಂತಿಗೆ ಸರ್ಕಾರಿ ರಜೆ ಘೋಷಿಸಿ
ಯಾದಗಿರಿ: ರಾಜ್ಯ ಸರ್ಕಾರ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವದಂದು ಸರ್ಕಾರಿ ರಜೆ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಅಧ್ಯಯನ ಅಕಾಡೆಮಿ ಅಧ್ಯಕ್ಷ ಅವಣ್ಣ ಮ್ಯಾಕೇರಿ ಒತ್ತಾಯಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾಜದ ಬಹುದಿನದ ಬೇಡಿಕೆಯಾದ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿದರು.
ಪ್ರತ್ಯೇಕ ನಿಗಮ ಸ್ಥಾಪಿಸಿ: ರಾಜ್ಯದಲ್ಲಿ ಸಮಾಜವು 65 ಲಕ್ಷ ಜನಸಂಖ್ಯೆ ಹೊಂದಿದೆ. ಆದರೆ ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದಿದೆ. ಸರ್ಕಾರ ಸುಕ್ಷೇತ್ರ ಯಾನಾಗುಂದಿಯಲ್ಲಿ ನಡೆಯುವ ಕೋಲಿ ಸಮಾಜದ ರಾಜ್ಯ ಮಟ್ಟದ ಸಾಂಸ್ಕೃತಿಕ, ಸಾಹಿತ್ಯಿಕ ಸಮ್ಮೇಳನಕ್ಕೆ 25 ಲಕ್ಷ ಅನುದಾನ ಬಿಡಗಡೆ ಮಾಡಬೇಕೆಂದು ಮನವಿ ಮಾಡಿದರು.
ತಾಂಡಾದ ಅಪಘಾತ: ಪರಿಹಾರದ ಜೊತೆಗೆ ನೌಕರಿ ನೀಡಿ
ಕೆಂಭಾವಿ: ಕಳೆದ ವಾರ ಬೆಳಗಿನ ಜಾವ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುರಪುರ ತಾಲೂಕಿನ ಕೊಡೇಕಲ್ ಹೋಬಳಿಯ ಉಪ್ಪಲದಿನ್ನಿ, ಜುಮಲಾಪುರ, ಮಾವಿನಗಿಡ ತಾಂಡಾದ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಮೃತಪಟ್ಟ ಪ್ರತಿ ಕುಟುಂಬಕ್ಕೂ ತಲಾ ಐದು ಲಕ್ಷ ರೂಗಳ ಪರಿಹಾರದ ಜೊತೆಗೆ ಬದುಕುಳಿದ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕೆಂಭಾವಿ ಹೋಬಳಿ ಉಪಾಧ್ಯಕ್ಷ ರವಿರಾಜ ಕಂದಳ್ಳಿ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.
ಇಂದು ಸಾಧಕರಿಗೆ ಪ್ರಶಸ್ತಿ ಪ್ರದಾನ
ಸುರಪುರ: ಇಲ್ಲಿಗೆ ಸಮೀಪದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ನ.20ರಂದು ಬೆಳಗ್ಗೆ 10.30ಕ್ಕೆ ಹಸನನಾಪುರದ ಶಿಲ್ಪಾ ನಾದ ಮಧುರ ಸಂಗೀತ ಮಹಾವಿದ್ಯಾಲಯದಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಹಾಗೂ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರದಾನ, ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಹಾ ವಿದ್ಯಾಲಯದ ಕಾರ್ಯದರ್ಶಿ ಭೀಮಾಶಂಕರ ಬಿಲ್ಲವ ತಿಳಿಸಿದ್ದಾರೆ.ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಕಲ್ಯಾಣ ನಾಡಿನ ಕಲಾರಾಧನ ಪ್ರಶಸ್ತಿ, ಶಿಕ್ಷಣ ಕ್ಷೇತ್ರದ ಸಾಧಕರಿಗೆ ಕಲ್ಯಾಣ ನಾಡಿನ ಶಿಕ್ಷಣ ರತ್ನ ಪ್ರಶಸ್ತಿ, ಸಮಾಜ ಸೇವಕರಿಗೆ ಕರ್ನಾಟಕ ಶ್ರೀಗಂಧ ರತ್ನ ಪ್ರಶಸ್ತಿ, ಉದ್ಯಮಿ ಕ್ಷೇತ್ರದ ಸಾಧಕರಿಗೆ ಉದ್ಯಮಿ ಪ್ರವೀಣ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಂತರ ವಿವಿಧ ಕಲಾವಿದರಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಿಲ್ಲವ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement