ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಇಂದು ಜೇವರ್ಗಿ ತಾಲೂಕು ಮಟ್ಟದ ಶೈಕ್ಷಣಿಕ ಸಮ್ಮೇಳನ

Lingaraj Badiger
Updated On : 23 Nov 2013, 11:08 am

ಜೇವರ್ಗಿ: ತಾಲೂಕು ಪಂಚಾಯ್ತಿ ಜೇವರ್ಗಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ 23ರಂದು ತಾಲೂಕು ಮಟ್ಟದ ಶೈಕ್ಷಣಿಕ ಸಮ್ಮೇಳನ, ನಿವೃತ್ತ ಶಿಕ್ಷಕರಿಗೆ, ಜಿಲ್ಲಾ ಉತ್ತಮ ಶಿಕ್ಷಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 11.30ಕ್ಕೆ ಪಟ್ಟಣದ ಸಜ್ಜನ್ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಡಾ. ಅಜಯಸಿಂಗ್ ಉದ್ಘಾಟಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಅಲ್ಲಂಪ್ರಭು ಪಾಟೀಲ್ ಸರ್ವಪಲ್ಲಿ ಡಾ. ರಾಧಾಕೃಷ್ಣ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ.
ಪಪಂ ಅಧ್ಯಕ್ಷೆ ಅನೀತಾ ಪಾರ್ಶಿ ಅಧ್ಯಕ್ಷತೆ ವಹಿಸುವರು. ಆರ್.ಕೆ. ಹುಡಗಿ ಉಪನ್ಯಾಸ ನೀಡುವರು. ತಾಪಂ ಅಧ್ಯಕ್ಷ ಮಲ್ಲಣ್ಣಗೌಡ ಪಾಟೀಲ್ ನೇದಲಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಸಾವಳೇಶ್ವರ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಅಕ್ಕಮಹಾದೇವಿ ಬಿರಾದಾರ, ತಾಪಂ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಆಂದೋಲಾ, ಪಪಂ ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಸುಬೇದಾರ ಇತರರು ಪಾಲ್ಗೊಳ್ಳುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement