ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಇಂದಿನಿಂದ ಕಂಪ್ಯೂಟರ್ ಆಪರೇಟರ್‌ಗಳ ಧರಣಿ

Lingaraj Badiger
Updated On : 25 Nov 2013, 11:26 am

ಶಹಾಪುರ: ಯಾದಗಿರ ಜಿಲ್ಲೆಯ 117 ಗ್ರಾಮ ಪಂಚಾಯತಿಗಳಲ್ಲಿ ಸುಮಾರು 8 ವರ್ಷಗಳಿಂದ ಗ್ರಾಪಂ ಎಲ್ಲಾ ಯೋಜನೆಗಳ ಕೆಲಸ ಕಾರ್ಯಗಳನ್ನು ಅಲ್ಪ ಸಂಬಳದಲ್ಲಿ ನಿರ್ವಹಿಸುತ್ತಾ ಬರಲಾಗಿದೆ.  ಯಾವುದೇ ತರಹದ ಸೇವಾ ಭದ್ರತೆಯನ್ನು ಸಹ ನೀಡುತ್ತಿಲ್ಲ. ಇದರ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ಹಲವಾರು ಬಾರಿ ತಂದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ದಿನನಿತ್ಯ ಗ್ರಾಪಂ ಸಿಬ್ಬಂದಿ ಮೇಲೆ ಸಾರ್ವಜನಿಕರಿಂದ ಮಾನಸಿಕವಾಗಿ, ದೈಹಿಕವಾಗಿ ಹಲ್ಲೆಯಾಗುತ್ತಿವೆ. ಅಲ್ಲದೇ ಅಧಿಕಾರಿಗಳು ಸಹ ನಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ಇದರಿಂದ ನಮಗೆ ಗ್ರಾಪಂ ಮಟ್ಟದಲ್ಲಿ ಕೆಲಸ ನಿರ್ವಹಿಸಲು ತುಂಬಾ ತೊಂದರೆಯಾಗುತ್ತಿದೆ. ವಿಭಾಗ ಮಟ್ಟದ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸಲು 23ರವರೆಗೆ ಸಮಯ ನೀಡಲಾಗಿತ್ತು. ಆದರೆ ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ. ಆದ್ದರಿಂದ ನ.25 ರಿಂದ ಜಿಲ್ಲೆಯ ಎಲ್ಲಾ ತಾಪಂ ಕಾರ್ಯಾಲಯದ ಮುಂದೆ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕಂಪ್ಯೂಟರ್ ಆಪರೇಟರ್ ಸಂಘದ ನಾಗರಾಜ ಗಚ್ಚಿ, ಬಿ.ಕೆ ಸಾಹು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement