ಸರ್ಕಾರದಿಂದ ಬಸವ ಉತ್ಸವ ಆಚರಿಸಲಿ: ವಿಜಯಕುಮಾರ್
ಚಿತ್ತಾಪುರ: ಪ್ರತಿ ಜಿಲ್ಲೆಯಲ್ಲಿ ಸರ್ಕಾರದಿಂದ ಬಸವ ಉತ್ಸವ ಆಚರಿಸಬೇಕು ಎಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಕೇಂದ್ರ ಘಟಕ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ ಒತ್ತಾಯಿಸಿದರು.
ಇಲ್ಲಿನ ಅಕ್ಕಮಹಾದೇವಿ ಮಂದಿರದಲ್ಲಿ ಹಮ್ಮಿಕೊಂಡ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ತಾಲೂಕು ಘಟಕ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಬೀದರನಲ್ಲಿ ಬಸವ ಉತ್ಸವ ಆಚರಿಸಲು ಸರ್ಕಾರ ಅನುದಾನ ನೀಡುವಂತೆ ಪ್ರತಿ ಜಿಲ್ಲೆಯಲ್ಲಿ ಬಸವ ಉತ್ಸವ ಆಚರಿಸಿ ವಚನ ಸಾಹಿತ್ಯ ಪ್ರಚಾರ ಮಾಡಬೇಕು ಎಂದು ಹೇಳಿದರು.
ಶರಣರ ವಚನಗಳು ಮನೆ ಮನಗಳಿಗೆ ತಲುಪಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ರಚಿಸಲಾಗಿದೆ ಎಂದರು.
ಕಾರ್ಯಕ್ರಮವನ್ನು ಹಿರಿಯ ನ್ಯಾಯವಾದಿ ಚಂದ್ರಶೇಖರ ಅವಂಟಿ ಉದ್ಘಾಟಿಸಿ ಮಾತನಾಡಿದರು. ಕಂಬಳೇಶ್ವರ ಮಠದ ಸೋಮಶೇಖರ ಶಿವಾಚಾರ್ಯರು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕೆಪಿಸಿಸಿ ಸದಸ್ಯ ನಾಗರಡ್ಡಿ ಪಟೀಲ್ ಕರದಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೇವರ್ಗಿ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಕೆ.ಬಿರಾದಾರ ಅವರು ಕನ್ನಡಕ್ಕೆ ವಚನ ಸಾಹಿತ್ಯ ಹಿನ್ನಲೆ ಕುರಿತು ಉಪನ್ಯಾಸ ನೀಡಿದರು. ವಿಶ್ವಗಂಗಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಂಕರ ಬಿರಾದಾರ, ತಾಲೂಕು ಕಸಾಪ ಅಧ್ಯಕ್ಷ ನಾಗಯ್ಯ ಸ್ವಾಮಿ ಅಲ್ಲೂರ, ಮಾಜಿ ಜಿಪಂ ಸದಸ್ಯ ಡಾ. ಗುಂಡಣ್ಣಾ ಬಾಳಿ ಮಾತನಾಡಿದರು.
ಶಿವಕುಮಾರ ಸ್ಥಾವರಮಠ, ಉದಯಕುಮಾರ್ ಸಾಗರ, ವಿರುಪಾಕ್ಷಿ ಬೆಣ್ಣಿ, ಮಸ್ತಾನ್ ಪಟೇಲ್, ರಂಗನಾಥ ದೊರೆ, ನಾಗರಾಜ ಹೆಬ್ಬಾಳ, ನವೀನ ಕಲಬುರ್ಗಿ ಶರಣು ಜ್ಯೋತಿ ಇದ್ದರು. ವಚನ ಸಾಹಿತ್ಯ ಅಕಾಡೆಮಿ ತಾಲೂಕು ಅಧ್ಯಕ್ಷ ಸಿದ್ಧಲಿಂಗ ಬಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.