ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡದಿರಲು ಸೂಚನೆ

Vishwanath S
Updated On : 6 Apr 2014, 12:29 pm

ಗುಲ್ಬರ್ಗ: ಲೋಕಸಭಾ ಚುನಾವಣೆಯ ಮತದಾನ ದಿನವು ಸಮೀಪಿಸುತ್ತಿದ್ದು, ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟೆಚ್ಚರ ವಹಿಸಬೇಕು ಹಾಗೂ ಅಕ್ರಮ ಚಟುವಟಿಕೆಗಳ ಮೇಲೆ ತೀವ್ರ ಹದ್ದಿನ ಕಣ್ಣಿಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್.ವಿ. ಪ್ರಸಾದ್ ಸೂಚಿಸಿದ್ದಾರೆ.
ಗುಲ್ಬರ್ಗದಲ್ಲಿ ಚುನಾವಣಾ ವೆಚ್ಚ, ಫ್ಲಾಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ಸರ್ವೇಲೆನ್ಸ್ ತಂಡ ಮತ್ತು ವೀಡಿಯೋ ವೀಕ್ಷಣಾ ತಂಡದಲ್ಲಿರುವ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾನಕ್ಕೆ ಕೇವಲ ಹನ್ನೆರಡು ದಿನಗಳು ಮಾತ್ರ ಉಳಿದಿದ್ದು, ರಾಜಕೀಯ ಪಕ್ಷಗಳ ಹಾಗೂ ಸ್ಪರ್ಥಿಸಿದ ಉಮೇದುವಾರರ ಪ್ರಚಾರ ಕಾರ್ಯ ಚಟುವಟಿಕೆಗಳು ಹೆಚ್ಚು ಚುರುಕು ಮತ್ತು ತೀವ್ರಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷ ಮತ್ತು ಉಮೇದುವಾರರು ನಡೆಸುವ ಮತ್ತು ಆಯೋಜಿಸುವ ಪ್ರತಿಯೊಂದು ಚಟುವಟಿಕೆಗಳ ಮೇಲೆ ಎಲ್ಲ ತಂಡಗಳು ಹೆಚ್ಚಿನ ನಿಗಾ ವಹಿಸಬೇಕು. ಎಲ್ಲ ಚಟುವಟಿಕೆಗಳ ಘಟನಾವಳಿಗಳನ್ನು ದಾಖಲೀಕರಿಸಬೇಕು. ಅದೇ ರೀತಿ ಎಲ್ಲ ತಂಡಗಳ ಮುಖ್ಯಸ್ಥರು ಪ್ರತಿದಿನ ನಿಗದಿತ ನಮೂನೆಗಳಲ್ಲಿ ವರದಿಗಳನ್ನು ತುರ್ತಾಗಿ ಸಲ್ಲಿಸಬೇಕು. ಪ್ರಾಮಾಣಿಕ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಬಗ್ಗೆ ಕೂಡಲೇ ಕ್ರಮ ಜರುಗಿಸಬೇಕು. ಯಾವುದೇ ಸಮಸ್ಯೆ ಅಥವಾ ತೊಂದರೆಗಳು ಎದುರಾದರೆ ಕೂಡಲೇ ತಮಗೆ ಮಾಹಿತಿ ನೀಡಿ ಎಂದು ಹೇಳಿದರು. ಚುನಾವಣಾ ನೀತಿ ಸಂಹಿತೆ ಜಿಲ್ಲಾ ನೋಡಲ್ ಅಧಿಕಾರಿ ಟಿ.ಎಚ್.ಎಂ. ಕುಮಾರ್, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಎಲ್ಲ ತಂಡಗಳ ಮುಖ್ಯಸ್ಥರು ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement