'ಕೈ' ಹಿಡಿದ ದಳದವರು
ಯಾದಗಿರಿ: ಗುರುಮಠಕಲ್ನ ಹತ್ತಿಕುಣಿ ವಲಯದ ಜೆಡಿಎಸ್ ಪಕ್ಷದ ಮುಖಂಡರಾದ ಶರಣಪ್ಪಗೌಡ ಅಲ್ಲಿಪೂರ ಅವರು ತಮ್ಮ ಬೆಂಬಲಿಗರೊಂದಿಗೆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ಮುಖಂಡ ರಾಧಾಕೃಷ್ಣ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ.
ರಾಧಾಕೃಷ್ಣ ಮಾತನಾಡಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಮೊದಲಿನಿಂದಲು ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ. ಅದನ್ನು ಜನತೆ ಮರೆತಿಲ್ಲ. ಎಲ್ಲಾ ಚುನಾವಣೆಗಳಲ್ಲಿ ಅವರನ್ನು ಬೆಂಬಲಿಸಿದ್ದಾರೆ ಎಂದು ಹೇಳಿದರು.
ಖರ್ಗೆ ಅವರ ಅಭಿವೃದ್ಧಿ ಕೆಲಸವನ್ನು ಮನಗಂಡು ವಿರೋಧ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಮತಗಳು ಬರುತ್ತವೆ. ಎಲ್ಲರು ಒಗ್ಗಟಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.
ಗುರುಮಠಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಿಪಾಲರಡ್ಡಿ ಪಾಟೀಲ್ ಹತ್ತಿಕುಣಿ, ಜಿಪಂ. ಮಾಜಿ ಉಪಾಧ್ಯಕ್ಷ ಲಕ್ಷ್ಮಾರಡ್ಡಿ ಅನಪೂರ, ಜಿಪಂ. ಸದಸ್ಯ ಭೀಮರಾಯ ಕಂದಕೂರ, ಸುಭಾಶ ಅಲ್ಲಿಪೂರ್ ಮುಂತಾದವರು ಇದ್ದರು.