3 ಶಿಕ್ಷಕರ ಅಮಾನತು
ಯಾದಗಿರಿ: ಚುನಾವಣಾ ಕಾರ್ಯಕ್ಕೆ ನಿಯೋಜಿಸಿ ಹೊರಡಿಸಿದ ಆದೇಶವನ್ನು ಪಡೆಯಲು ನಿರಾಕರಿಸಿದ ಮತ್ತು ಚುನಾವಣಾ ಕರ್ತವ್ಯವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ತೋರಿರುವ ಮೂವರು ಶಿಕ್ಷಕರನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಆದೇಶಿಸಿದ್ದಾರೆ.
ಸುರಪುರ ತಾಲೂಕಿನ ಮುದನೂರು(ಬಿ) ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕಿ ರಾಯವ್ವ ಉಕ್ಲಿ, ಹಗರಟಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಎ.ಬಿ. ಸಜ್ಜನ್, ಯಾದಗಿರಿ ತಾಲೂಕಿನ ಕೋಲಿವಾಡ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಮಲ್ಲಮ್ಮ ಮೇಲೆ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಲಾಗಿದೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.