ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ

Rashmi Kasaragodu
Updated On : 8 Apr 2014, 11:52 am

ಯಾದಗಿರಿ: ನಗರದ ವಿವಿಧ ವಾರ್ಡ್‌ಗಳಲ್ಲಿ ಜನತೆ ತೀವ್ರ ಕುಡಿವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ನಗರಸಭೆ ಗಮನ ಹರಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಬೇಕೆಂದು ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಕಳೆದ ಎರಡು ವರ್ಷಗಳಿಂದ ಜನತೆ ನೀರಿನ ಸಮಸ್ಯೆ ಎದುರಿಸುತ್ತಿದ್ದು, ನಗರಸಭೆಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದೆ. ಇದು ಜನರ ಸಮಸ್ಯೆ ಪರಿಹಾರ ಸಿಕ್ಕಿಲ್ಲ ಕೂಡಲೇ ವಾರ್ಡ್‌ಗಳಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಾಣ ಮಾಡಬೇಕು. ಆಗ ಮಾತ್ರ ಜನರಿಗೆ ಹೆಚ್ಚಿನ ಅನುಕೂಲತೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದರು.
ವೇದಿಕೆ ಜಿಲ್ಲಾಧ್ಯಕ್ಷ ಖಾಜಾ ಮೈನೋದ್ದಿನ್, ನರಸು ಬುಡಯ್ಯನೋರ್, ಮಲ್ಲೇಶ ನಾಯಕ, ರಂಗನಾಥ ದೇವದುರ್ಗ, ಲಕ್ಷ್ಮಣ ಕಣೇಕಲ್, ಶಿವರಾಜ ನಕ್ಕಲ್, ಶಿವಕುಮಾರ ಪಾಟೀಲ್, ವಿನಾಯಕ ದಾಸನ್, ಶಿವಾನಂದಪ್ಪ ಪರಶುನಾಯಕ, ರಾಹುಲ್ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement