ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಬಂಡವಾಳಶಾಹಿ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿಲ್ಲ: ಮುನಿಯಪ್ಪ

Rashmi Kasaragodu
Updated On : 8 Apr 2014, 11:51 am

ಯಾದಗಿರಿ: ಬಡವರನ್ನು ಬಡವರಾಗಿಯೇ ಉಳಿಸುವ ತಂತ್ರವನ್ನು ಅನುಸರಿಸುತ್ತಾ ಕಾರ್ಪೋರೇಟ್ ಸಂಸ್ಥೆಗಳಿಗೆ, ಬಂಡವಾಳಶಾಹಿಗಳಿಗೆ ಒಲೈಸುವ ಸರ್ಕಾರಗಳಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
 ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಅತಿ ಹೆಚ್ಚು ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಈ ಹಿಂದೆ ಕಂಬಾಲಪಲ್ಲಿ ನರಮೇಧ ನಡೆದದ್ದು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ. ಅಷ್ಟೇ ಅಲ್ಲದೆ ದಲಿತ ವರ್ಗದವರೇ ಆದ ಮಲ್ಲಿಕಾರ್ಜುನ ಖರ್ಗೆ ಗೃಹ ಮಂತ್ರಿಯಾಗಿದ್ದಾಗ ಎಂಬುದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲವೆಂದು ಹೇಳಿದರು.
ಈಡೇರದ ಭರವಸೆ: ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ 6 ದಶಕಗಳಿಂದ ಬಿಡುಗಡೆಗೊಳಿಸುತ್ತಿರುವ ಪ್ರಣಾಳಿಕೆಗಳಲ್ಲಿ ಎಷ್ಟು ಈಡೇರಿಸಿದೆ ಎಂಬುದನ್ನು ಜನತೆಯ ಮುಂದೆ ಸ್ಪಷ್ಟಪಡಿಸಲಿ. 60 ವರ್ಷಗಳಿಂದ ಜನತೆಗೆ ನೀಡುತ್ತಿರುವ ಭರವಸೆಗಳಲ್ಲಿ ಎಷ್ಟು ಈಡೇರಿವೆ ಸ್ಪಷ್ಟಪಡಿಸಲಿ ಎಂದರು.
  ಕಳೆದ 5 ವರ್ಷಗಳಿಂದ ಸಾಮಾನ್ಯ ಜನತೆ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. 50ಕ್ಕೂ ಹೆಚ್ಚು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿದೆ. ಜನಸಾಮಾನ್ಯರಿಗೆ ಬೆಲೆ ಏರಿಕೆಯ ಒತ್ತಡದ ಜೀವನದಲ್ಲಿಟ್ಟು ಬೃಹತ್ ಕೈಗಾರಿಕೆಗಳಿಗೆ ರಿಯಾಯಿತಿ ದರದಲ್ಲಿ ಭೂಮಿ ನೀಡುವುದು, ವಿದ್ಯುತ್ ನೀಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement