ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಬಿಜೆಪಿ ಗೆಲವು ಖಚಿತ: ನರಿಬೋಳ

Rashmi Kasaragodu
Updated On : 9 Apr 2014, 10:51 am

ಜೇವರ್ಗಿ: ಜೇವರ್ಗಿ ಮತಕ್ಷೇತ್ರ ಸೇರಿದಂತೆ ಜಿಲ್ಲಾದ್ಯಂತ ಅಭಿವೃದ್ಧಿ ಕಾರ್ಯ ಮಾಡಿದ್ದು ಬಿಜೆಪಿ ಸರ್ಕಾರ. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರಂಸಿಂಗ್ ಉನ್ನತ ಸಚಿವ ಸ್ಥಾನಗಳನ್ನು ಹೊಂದಿದ್ದರೂ ಈ ಭಾಗದ ಅಭಿವೃದ್ಧಿಗೆ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದೆರಡು ದಿನಗಳ ಹಿಂದೆ ಜೇವರ್ಗಿಯಲ್ಲಿ ಪ್ರಚಾರ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲವೆಂದು ಹೇಳಿದ್ದರು. ಆದರೆ ನರೇಂದ್ರ ಮೋದಿ ಅವರು ಕಳೆದ 13 ವರ್ಷಗಳಿಂದ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯವನ್ನು ನಂ.1 ಸ್ಥಾನಕ್ಕೆ ತಂದಿದ್ದಾರೆ ಎಂದು ಕೇಂದ್ರದಲ್ಲಿನ ಯುಪಿಎ ಸರ್ಕಾರವೇ ಪ್ರಮಾಣ ಪತ್ರ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ 9 ತಿಂಗಳಿಂದ ರಾಜ್ಯದ ಜನತೆಗೆ ಸುಳ್ಳು ಭರವಸೆ ನೀಡುತ್ತ, ಯೋಜನೆಗಳನ್ನು ಜಾರಿಗೆ ತರುವುದು ಮತ್ತೆ ಹಿಂಪಡೆಯುವಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.



ಮಾಲಗತ್ತಿ: ಮೃತರ ಕುಟುಂಬಕ್ಕೆ ಬೆಳಮಗಿ ಸಾಂತ್ವನ


ಶಹಾಬಾದ್: ಜೇವರ್ಗಿಯಲ್ಲಿ ಶುಕ್ರವಾರ ಟಂಟಂ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಚಿತ್ತಾಪುರ ತಾಲೂಕಿನ ಮಾಲಗತ್ತಿ ಗ್ರಾಮದ ಶಿವಮ್ಮ ಹಿಡ್ಡಿನಮನಿ ಹಾಗೂ ಪವನ ಮನೆಗೆ ಮಾಜಿ ಸಚಿವ ರೇವುನಾಯಕ ಬೆಳಮಗಿ ಹಾಗೂ ಮಾಜಿ ಶಾಸಕ ವಾಲ್ಮೀಕಿ ನಾಯಕ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಚುನಾವಣಾ ಪ್ರಚಾರಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಮಾಲಗತ್ತಿ ಗ್ರಾಮದ ಮೃತಪಟ್ಟ ಇಬ್ಬರ ಮನೆಗೆ ಹೋದಾಗ ಕುಟುಂಬದವರ ಹಾಗೂ ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟುವಂತಿತ್ತು. ಆ ಆಕ್ರಂದನ ಮಧ್ಯದಲ್ಲಿಯೇ ಮಾಜಿ ಸಚಿವ ಬೆಳಮಗಿ ಹಾಗೂ ಮಾಜಿ ಶಾಸಕ ವಾಲ್ಮೀಕಿ ನಾಯಕ ಮೃತ ಕುಟುಂಬಕ್ಕೆ ಸಾಂತ್ವನ ಹೇಳಿ ನಂತರ ಚುನಾವಣಾ ಪ್ರಚಾರಕ್ಕೆ ತೆರಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement