ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಆಳಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ

Mainashree
Updated On : 12 Apr 2014, 11:20 am

ಆಳಂದ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಳಂದ ಪಟ್ಟಣಕ್ಕೆ ಆಗಮಿಸಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ಸಂಪೂರ್ಣ ಸಹಕರಿಸಲಾಗುವುದು ಎಂದು ಭರವಸೆ ನೀಡಿದ ಮೇಲೆ ಕಾಂಗ್ರೆಸ್ ಪರ ಮತದಾರರ ಒಲುವು ಮೂಡಿದ್ದು, ಧರ್ಮಸಿಂಗ್ ಗೆಲವು ಖಚಿತ ಎಂದು ಕೆಜೆಪಿ ಶಾಸಕ ಬಿ.ಆರ್. ಪಾಟೀಲ ಹೇಳಿದರು.
ಪಟ್ಟಣದಲ್ಲಿ ಬೀದರ್ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎನ್. ಧರ್ಮಸಿಂಗ್ ಪರ ಪ್ರಚಾರ ಕೈಗೊಂಡು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಯ ಹಿತ ದೃಷ್ಟಿಯಿಂದ ಹಾಗೂ ಸಾರ್ವಜನಿಕರ ಕೆಲ ಕಾರ್ಯಗಳನ್ನು ಮಾಡಿಕೊಡುವ ಹಿತಾಶಕ್ತಿಯಿಂದಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧರಂಸಿಂಗ್ ಅವರಿಗೆ ಬೆಂಬಲ ಸೂಚಿಸಲಾಗಿದೆ. ಚುನಾವಣೆಯಲ್ಲಿ ಎಲ್ಲ ರೀತಿಯಿಂದಲೂ ಹೆಚ್ಚಿನ ಮತಗಳನ್ನು ದೊರೆಯುವಂತೆ ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಲಿದ್ದಾರೆ ಎಂದು ಶಾಸಕ ಬಿ.ಆರ್. ಪಾಟೀಲ ಹೇಳಿದರು. ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್, ಕೆಜೆಪಿ ತಾಲೂಕು ಅಧ್ಯಕ್ಷ ಶಿವುಪುತ್ರಪ್ಪಾ ಪಾಟೀಲ ಮುನ್ನಹಳ್ಳಿ, ತಾಪಂ ಮಾಜಿ ಅಧ್ಯಕ್ಷ ಮೋಹನಗೌಡ ಪಾಟೀಲ, ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಮಲ್ಲಿನಾಥ ಪರೇಣಿ, ಗುರುಶರಣ ಪಾಟೀಲ ಕೋರಳ್ಳಿ, ವಕ್ತಾರ ಶರಣು ಪಾಟೀಲ, ಎನ್.ಟಿ. ದೇಶಮುಖ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement