ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಗೆಲವು ಖಚಿತ
ಸುರಪುರ:ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವನಗೌಡನಾಯಕ ಗೆಲವು ಕೂಡಾ ನಿಶ್ಚಿತ ಎಂದು ಯಾದಗಿರಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪನಾಯಕ(ತಾತಾ)ಹೇಳಿದ್ದಾರೆ. ಪಟ್ಟಣದಲ್ಲಿ ತಿಮ್ಮಾಪುರ-ರಂಗಂಪೇಟೆಯ ಹಲವು ಯುವಕರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ಸಂದರ್ಭದಲ್ಲಿ ಅವರು ಮಾತನಾಡಿ, ದೇಶದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಿಫಲವಾಗಿದೆ ಎಂದು ದೂರಿದರು. ಭೀಮಣ್ಣ ಪೂಜಾರಿ, ಅಂಬಣ್ಣ ಕಟ್ಟಿಮನಿ ಮೊದಲಾದವರು ಬಿಜೆಪಿಗೆ ಸೇರ್ಪಡೆಯಾದರು. ಮುಖಂಡರಾದ ಹಣಮಂತ ಚಂದನಕೇರಿ, ಬಸ್ಸು ಚಂದನಕೇರಿ, ಸೋಫಿಸಾಬ್ ನಾಗರಾಳ ಇದ್ದರು.