ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

132 ಪ್ರಕರಣ ದಾಖಲು

Rashmi Kasaragodu
Updated On : 17 Apr 2014, 11:27 am

ಗುಲ್ಬರ್ಗ: ಅಬಕಾರಿ ಮತ್ತು ಪೊಲೀಸ್ ಇಲಾಖೆಗಳಿಂದ ಏಪ್ರಿಲ್ 15 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಒಟ್ಟು 132 ಪ್ರಕರಣಗಳನ್ನು ದಾಖಲಿಸಲಾಗಿದ್ದು, 2546. 42 ಲೀ. ಮದ್ಯ ವಶಪಡಿಸಿಕೊಳ್ಳಲಾಗಿದೆ. 128 ಜನರ ವಿರುದ್ಧ ಎಫ್ಐಆರ್ ದೂರು ದಾಖಲಿಸಲಾಗಿದೆ. ಏಪ್ರಿಲ್ 15 ರಂದು ಅಬಕಾರಿ ಇಲಾಖೆಯಿಂದ ಒಂದು ಪ್ರಕರಣ ದಾಖಲಿಸಿದ್ದು, 134. 16 ಲೀ. ಮದ್ಯ ವಶಪಡಿಸಿಕೊಳ್ಳಲಾಗಿದೆ.
ಈವರೆಗೆ ದಾಖಲಿಸಿದ ಒಟ್ಟು 132 ಪ್ರಕರಣಗಳ ಪೈಕಿ ಅಬಕಾರಿ ಇಲಾಖೆಯಿಂದ ದಾಖಲಿಸಿದ 115 ಪ್ರಕರಣಗಳಿಂದ 2, 307. 22 ಲೀ. ಮದ್ಯ ಹಾಗೂ 3.60 ಕೆ.ಜಿ. ಗಾಂಜಾ, 1 ಕೆ.ಜಿ ಸಿ.ಎಚ್. ಪೌಡರ್ ಮತ್ತು ಎರಡು ದ್ವಿಚಕ್ರ ವಾಹನಗಳನ್ನು ಹಾಗೂ ಪೊಲೀಸ್ ಇಲಾಖೆಯಿಂದ ದಾಖಲಿಸಿದ 17 ಪ್ರಕರಣಗಳಿಂದ 239.20 ಲೀ. ಮದ್ಯ ಹಾಗೂ 1.5 ಕೆ.ಜಿ. ಸಿಎಚ್ ಪೌಡರ್ ವಶಪಡಿಸಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದ್ದಾರೆ.
ಕಾರ್ಮಿಕರಿಗೆ ವೇತನ ಸಹಿತ ರಜೆ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಏ.17ರ ಮತದಾನದ ಗುಲ್ಬರ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ತರಹದ ತೋಟಗಳ ಮಾಲೀಕರು, ವ್ಯವಸ್ಥಾಪಕರು, ಸಿಮೆಂಟ್ ಮತ್ತಿತರ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಕಾರ್ಮಿಕರಿಗೆ ಕರ್ನಾಟಕ ಔದ್ಯಮಿಕ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆ) ಕಾಯ್ದೆ 1963 ಕಲಂ 3(ಎ)ರನ್ವಯ ಎಲ್ಲಾ ವರ್ಗದ ಕಾರ್ಮಿಕರಿಗೆ ಮತ ಚಲಾಯಿಸುವ ಸಲುವಾಗಿ ವೇತನ ಸಹಿತ ರಜೆ ನೀಡುವಂತೆ ಎಲ್ಲಾ ಮಾಲೀಕರು, ನಿಯೋಜಕರಿಗೆ ಸೂಚಿಸಿದೆ. ಒಂದು ವೇಳೆ ಯಾವುದೇ ಮಾಲೀಕರು ರಜಾ ನೀಡಲು ನಿರಾಕರಿಸಿದ್ದಲ್ಲಿ ಕಲಂ 3(ಎ)ಯ ಉಲ್ಲಂಘನೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಸಹ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments