ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

580 ಜನರಿಗೆ ಮತ ಚಲಾವಣೆ ಹಕ್ಕು

Rashmi Kasaragodu
Updated On : 29 Apr 2014, 12:12 pm

ಗುಲ್ಬರ್ಗ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಗುಲ್ಬರ್ಗ(ಪ.ಜಾ.) ಮೀಸಲು ಕ್ಷೇತ್ರ ವ್ಯಾಪ್ತಿಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಮತಗಟ್ಟೆ ಸಂಖ್ಯೆ 165ರಲ್ಲಿ ಏ.29ರಂದು ನಡೆಯುವ ಮರು ಮತದಾನದಲ್ಲಿ 280 ಪುರುಷರು ಮತ್ತು 300 ಮಹಿಳೆಯರು ಸೇರಿದಂತೆ ಒಟ್ಟು 580 ಜನರು ಮತದಾನದ ಹಕ್ಕು ಹೊಂದಿದ್ದಾರೆ.
ಮತದಾನ ಬೆ.7ರಿಂದ ಸಂಜೆ 6ರವರೆಗೆ ಜರುಗಲಿದ್ದು, ಮತದಾನ ಮಾಡಲು ಆಗಮಿಸುವ ಮತದಾರರ ಬಲಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯ ಗುರುತು ಹಾಕಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್.ವಿ. ಪ್ರಸಾದ್ ತಿಳಿಸಿದ್ದಾರೆ.
ಅಗತ್ಯ ಸಿದ್ಧತೆ: ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮರು ಮತದಾನಕ್ಕೆ ಅಗತ್ಯ ಚುನಾವಣಾ ಸಿಬ್ಬಂದಿ ನೇಮಕಾತಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಹಾಗೂ ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯಲು ಅನುವಾಗುವಂತೆ ಎಲ್ಲ ಸಿದ್ಧತೆ ಮಾಡಲಾಗಿದೆ.
 ಏ.17ರಂದು ಕೋಡ್ಲಾ ಗ್ರಾಮದ ಮತಗಟ್ಟೆ ಸಂಖ್ಯೆ 165ರಲ್ಲಿಟ್ಟ ವಿದ್ಯುನ್ಮಾನ ಮತಯಂತ್ರದ ತಯಾರಿಕಾ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸದರಿ ಮತಗಟ್ಟೆಯಲ್ಲಿ ಏ.29ರಂದು ಮರು ಮತದಾನ ನಡೆಸಲು ಆದೇಶ ಹೊರಡಿಸಿದೆ.
ಮರು ಮತದಾನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಸೇಡಂ ವಿಧಾನಸಭಾ ಕ್ಷೇತ್ರದಾದ್ಯಂತ ಏ.29ರ ಸಂಜೆ 6ರವರೆಗೆ ಬಾರ್, ಹೋಟೆಲ್, ರೆಸ್ಟೋರೆಂಟ್, ಸ್ಟಾರ್ ಹೋಟೆಲ್, ಧಾಬಾ ಹಾಗೂ ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲ ತರಹದ ಮದ್ಯ ಮತ್ತು ಇತರೆ ಮಾದಕ ವಸ್ತುಗಳ ಮಾರಾಟವನ್ನು ನಿಷೇಧಿಸಲಾಗಿದೆ.  ಸೇಡಂ ವಿಧಾನಸಭಾ ಮತಕ್ಷೇತ್ರಕ್ಕೆ ಹೊಂದಿಕೊಂಡ ಕ್ಷೇತ್ರ ಅಥವಾ ಇತರೆ ಸ್ಥಳಗಳಿಂದ ಮದ್ಯ ಹಾಗೂ ಮಾದಕ ವಸ್ತುಗಳು ಒಳ ಪ್ರವೇಶಿಸದಂತೆ ನಿಗಾ ಇಡಲು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement