ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕಾಂಗ್ರೆಸ್-ಬಿಜೆಪಿ ಹೊರತುಪಡಿಸಿ ಹೊಂದಾಣಿಕೆಗೆ ಸಿದ್ಧ: ವೈಜನಾಥ

Srinivasa Murthy VN
Updated On : 5 Feb 2014, 11:39 am

ಚಿಂಚೋಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದೇ ಮುಖ್ಯ ಗುರಿ. ಬೀದರ್ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅನೇಕರು ನಮ್ಮನ್ನು ಒತ್ತಾಯಿಸುತ್ತಿದ್ದು ನನಗೂ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ಇದೆ. ಕಾಂಗ್ರೆಸ್- ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೈ-ಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಹೇಳಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೈ-ಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಹೈ-ಕ ಹೋರಾಟ ಸಮಿತಿ ಸ್ಪರ್ಧಿಸಲಿದೆ. ಕಾಂಗ್ರೆಸ್-ಬಿಜೆಪಿ ಹೊರತುಪಡಿಸಿ ಬೇರೆ ತೃತೀಯ ರಂಗದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
ಸದ್ಯ ನಾನು ಯಾವುದೇ ಪಕ್ಷದಲ್ಲಿಲ್ಲ. ಆಮ್ ಆದ್ಮಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಸಲಹೆ ಬರುತ್ತಿವೆ. ಇದರ ಬಗ್ಗೆ ಸಮಿತಿಯಲ್ಲಿ ಚರ್ಚೆ ನಡೆಸಲಾಗುವುದು. ನಾನು ಚುನಾವಣೆಗೆ ನಿಲ್ಲುವುದು ಖಚಿತ. ನಾನು ನಿಲ್ಲದಿದ್ದರೆ ಬೇರೆ ಸ್ಥಳೀಯ ಅಭ್ಯರ್ಥಿಗಳನ್ನು ನಿಲ್ಲಿಸುವ ಪ್ರಯತ್ನ ನಡೆದಿದೆ ಎಂದು ಸ್ಪಷ್ಟಪಡಿಸಿದರು.
ಶಾಸಕರು ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಸಲಹೆ ನೀಡಿದ ಅವರು, ಬರುವ ಲೋಕಸಭೆ ಚುನಾವಣೆಯಲ್ಲಿ ಹಾಲಿ ಲೋಕಸಭೆ ಸದಸ್ಯ ಧರ್ಮಸಿಂಗ್ ಅವರು ಮತ್ತೆ ಸ್ಪರ್ಧಿಸಿದರೆ ಅವರ ಸೋಲು ಖಚಿತವೆಂದು ಭವಿಷ್ಯ ನುಡಿದರು.

ಸಂಘಟನೆ: ಜೆಡಿಎಸ್ ಪ್ರವಾಸ ಇಂದಿನಿಂದ
ಗುಲ್ಬರ್ಗ: ಲೋಕಸಭಾ ಚುನಾವಣೆಹಿನ್ನೆಲೆ ಹಾಗೂ ಜಿಲ್ಲೆಯಲ್ಲಿ ಪಕ್ಷವನ್ನು ಕೆಳಹಂತದಿಂದ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಜೆಡಿಎಸ್ ಜಿಲ್ಲಾದ್ಯಕ್ಷ ಬಸವರಾಜ ತಡಕಲ್‌ರ ನೇತೃತ್ವದಲ್ಲಿ ಜಿಲ್ಲಾದ್ಯಂತ ಫೆ.5ರಂದು ಪ್ರವಾಸ ಹಮ್ಮಿಕೊಳ್ಳಲಾಗಿದೆ ಎಂದು ಮಹಾ ಪ್ರಧಾನ ಕಾರ್ಯದರ್ಶಿ ದೇವೇಗೌಡ ತೆಲ್ಲೂರ ತಿಳಿಸಿದ್ದಾರೆ. ಬೆ.10ಕ್ಕೆ ಪಕ್ಷದ ಜಿಲ್ಲಾ ಕಚೇರಿ ಆವರಣದಲ್ಲಿ ಪ್ರವಾಸ ಕಾರ್ಯಕ್ರಮಕ್ಕೆ ಮಾಜಿ ಸಭಾಪತಿಗಳು ಹಾಗೂ ರಾಜ್ಯ ಕಾರ್ಯಾಧ್ಯಕ್ಷ ಡೇವಿಡ್ ಸಿಮೆಯೋನ್‌ರವರು ಚಾಲನೆ ನೀಡಲಿದ್ದಾರೆ. ಪ್ರಥಮ ಹಂತವಾಗಿ ಅಫಜಲ್ಪುರದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಫೆ.5ರಂದು ಬೆ.11ಕ್ಕೆ ತಾಲೂಕು ಜಾತ್ಯತೀತ ಜನತಾ ದಳ ಪಕ್ಷದ ಸಭೆ ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement