ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಮೋದಿಯಿಂದ ಮಾತ್ರ ಸುಭದ್ರ ರಾಷ್ಟ್ರ

Lingaraj Badiger
Updated On : 6 Feb 2014, 12:45 pm

ಜೇವರ್ಗಿ: ಸದೃಢ ರಾಷ್ಟ್ರ ನಿರ್ಮಾಣ ಕಾರ್ಯ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಮೋದಿ ಅವರು ರಾಷ್ಟ್ರದ ಏಕತೆಗಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಯನ್ನು ನಿರ್ಮಿಸಲು ರೈತರಿಂದ ಲೋಹ ಸಂಗ್ರಹಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಹೇಳಿದರು.
 ತಾಲೂಕಿನ ಅರಳಗುಂಡಗಿಯಲ್ಲಿ ಬುಧವಾರ ಜಿಲ್ಲಾ ಲೋಹ ಸಂಗ್ರಹಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಲೋಹ ಸಂಗ್ರಹಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಯಕಯೋಗಿ ಬಸವೇಶ್ವರರ ಜನ್ಮ ಸ್ಥಳ ಸುಕ್ಷೇತ್ರ ಅರಳಗುಂಡಗಿಯಿಂದ ಲೋಹ ಸಂಗ್ರಹಣಾ ಕಾರ್ಯಕ್ಕೆ ಚಾಲನೆ ದೊರೆತಿದ್ದರಿಂದ ಈ ಕಾರ್ಯ ಸಂಪೂರ್ಣ ಯಶಸ್ವಿಯಾಗಲಿದೆ. ಜಿಲ್ಲಾ ಲೋಹ ಸಂಗ್ರಹಣಾ ಸಮಿತಿ ಪದಾಧಿಕಾರಿಗಳು ಜಿಲ್ಲೆಯಾದ್ಯಂತ ಸಂಚರಿಸಿ ಲೋಹ ಸಂಗ್ರಹ ಕಾರ್ಯದಲ್ಲಿ ತೊಡಗಲಿದ್ದಾರೆ. ದೇಶದ ಏಕತೆಯ ಪ್ರತೀಕವಾಗಿ ಗುಜರಾತ್ ರಾಜ್ಯದಲ್ಲಿ ಸರ್ದಾರ ಪಟೇಲ್ ಅವರ ಪುತ್ಥಳಿ ಸ್ಥಾಪಿಸಲು ಮೋದಿ ಮುಂದಾಗಿರುವುದು ಶ್ಲಾಘನೀಯ ಎಂದರು. ರಾಷ್ಟ್ರ ಏಕತೆ, ಅಖಂಡತೆಗಾಗಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವಿರತವಾಗಿ ಶ್ರಮಿಸಿದ್ದಾರೆ. ಅವರೊಬ್ಬ ಮಹಾನ್ ನಾಯಕರೆಂದು ಬೆಳಮಗಿ ಅಭಿಪ್ರಾಯಪಟ್ಟರು.
   ಲೋಹ ಸಂಗ್ರಹಣಾ ಸಮಿತಿಯ ಜಿಲ್ಲಾ ಸಂಚಾಲಕ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮಾತನಾಡಿ, ಇಡಿ ವಿಶ್ವದಲ್ಲಿಯೆ ಅತಿ ಎತ್ತರದ ಪಟೇಲ್ ಪ್ರತಿಮೆ ತಯಾರಿಸಲಾಗುತ್ತಿದ್ದು, ಮೋದಿ ಅವರ ಕಾರ್ಯ ಶ್ಲಾಘನೀಯ ಎಂದರು.   
  ಅರಳಗುಂಡಗಿಯ ನಾಗಪ್ಪ ಶರಣರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಬಸವೇಶ್ವರರ ಮೂರ್ತಿಯ ಮೆರವಣಿಗೆ ನಡೆಯಿತು. ವಿದ್ಯಾಸಾಗರ ಕುಲಕರ್ಣಿ, ಎಂ.ಬಿ.ಪಾಟೀಲ್ ಸೇರಿದಂತೆ ಲೋಹ ಸಂಗ್ರಹಣಾ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement