ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕನ್ನಡ ಭವನಕ್ಕೆ 10 ಲಕ್ಷ ಅನುದಾನ: ಚಂದು

Vishwanath S
Updated On : 8 Feb 2014, 1:21 am

ಜೇವರ್ಗಿ: ಕನ್ನಡ ಸಾಹಿತ್ಯಿಕ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಟ್ಟಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕನ್ನಡ ಭವನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ರು. 10 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕನ್ನಡ ನುಡಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿನ ಕನ್ನಡ ಭವನಗಳು ಶಕ್ತಿ ಕೇಂದ್ರಗಳಂತೆ ಕಾರ್ಯನಿರ್ವಹಿಸಬೇಕು. ಕನ್ನಡ ನಾಡು-ನುಡಿಗೆ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳು ಪ್ರಾಧಿಕಾರದೊಂದಿಗೆ ಕೈಜೋಡಿಸಬೇಕು. ಕನ್ನಡ ಭಾಷೆಯನ್ನು ಗೌರವಿಸಬೇಕು. ಬೇರೆ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡಿಗರು ಪರಸ್ಪರ ಪ್ರೀತಿ ವಿಶ್ವಾಸ ಹೊಂದಿರಬೇಕೆಂದು ಡಾ.ಚಂದ್ರ ತಿಳಿಸಿದರು.
ಶಾಸಕ ಡಾ.ಅಜಯಸಿಂಗ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಹಿತಿ ಡಾ.ಕಾಶಿನಾಥ ಅಂಬಲಗೆ ಕನ್ನಡ ನಾಡು-ನುಡಿ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ತಾಪಂ ಅಧ್ಯಕ್ಷ ಮಲ್ಲಣ್ಣಗೌಡ ನೇದಲಗಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಆಂದೋಲಾ, ಪಪಂ ಅಧ್ಯಕ್ಷೆ ಅನೀತಾ ಪಾರ್ಶಿ ಸೇರಿದಂತೆ ಇನ್ನಿತರರು ಆಗಮಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಕರ್ನಾಟಕ ಪ್ರಸಿದ್ಧ ಜಾನಪದ ಕಲಾ ತಂಡಗಳಿಂದ ಕನ್ನಡ ನುಡಿ ಜಾಗೃತಿ ಜಾಥಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ವೀರಭದ್ರ ಸಿಂಪಿ, ಶಾಂತಗೌಡ ದುಮ್ಮದ್ರಿ, ಶಂಕರಗೌಡ ಹಾಲಗಡ್ಲಾ, ಎಸ್.ಕೆ. ಬಿರಾದಾರ, ಶರಣಬಸವ ಕಲ್ಲಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement