ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ?

Mainashree
Updated On : 10 Feb 2014, 10:45 am

ಗುರುಮಠಕಲ್: ಪಕ್ಷದಲ್ಲಿನ ಹಿರಿಯ ಶಾಸಕರು ತಮಗೆ ಸಚಿವ ಸ್ಥಾನ ನೀಡುವ ಬಗ್ಗೆ ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಭಾನುವಾರ ಯಾನಗುಂದಿಯಲ್ಲಿ ಏರ್ಪಡಿಸಿದ್ದ ಗಂಗಾಮತ ಕೋಲಿ ಸಮಾಜದ ರಾಜ್ಯ ಸಮ್ಮೇಳನದಲ್ಲಿ ಭಾಗವಹಿಸಲು ಗುರುಮಠಕಲ್ ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, ರಾಜ್ಯ ಸಚಿವ ಸಂಪುಟ ರಚನೆ ವೇಳೆ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕೆಂದು ಈ ಭಾಗದ ನಾಲ್ವರು ಶಾಸಕರು ಹೈಕಮಾಂಡ್‌ನ ಮೊರೆ ಹೋಗಿರುವುದರಲ್ಲಿ ತಪ್ಪೆನಿಲ್ಲ. ಅವರು ಪಕ್ಷ ವಿರೋಧಿಯಾದ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ. ತಮಗೆ ಸಚಿವ ಸ್ಥಾನ ನೀಡಬೇಕೆಂದು ಕೇಳುತ್ತಿದ್ದಾರೆ ಅಷ್ಟೇ ಎಂದರು.
ಪಕ್ಷದಲ್ಲಿ ಎಲ್ಲರೂ ಸಚಿವ ಸ್ಥಾನದ ಅಕಾಂಕ್ಷಿಗಳೇ ಆಗಿದ್ದಾರೆ. ಅದರೆ ಎಲ್ಲರನ್ನೂ ಸಮಾಧಾನಪಡಿಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಪಕ್ಷದ ಹೈಕಮಾಂಡ್ ಈ ಬಗ್ಗೆ ಯಾವುದೇ ಸೂಚನೆ ನೀಡಿದರೆ ಅದರಂತೆ ನಡೆದುಕೊಳ್ಳುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement