ಮುಂದೂಡಿಕೆ
ಗುಲ್ಬರ್ಗ: ಅಂಗನವಾಡಿ ಕೇಂದ್ರಗಳನ್ನು ಖಾಸಗೀಕರಣ ವಿರೋಧಿಸಿ ಕನಿಷ್ಠ ಕೂಲಿಗಾಗಿ ಒತ್ತಾಯಿಸಿ ಕರ್ನಾಟಕ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಫೆ.10 ರಂದು ಜಿಲ್ಲಾ ಕಚೇರಿ ಎದುರು ಅನಿರ್ದಿಷ್ಟಾವಧಿ ಕಾಲ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು.
ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಸಂಘದ ಬೇಡಿಕೆಗಳಿಗೆ ಸ್ಪಂಧಿಸಿ ಗೌರವ ಧನ ಹೆಚ್ಚಳ, ಕಟ್ಟಿಗೆ ಹಣ ಹೆಚ್ಚಳ, ಮಿನಿ ಅಂಗನವಾಡಿ ಕೇಂದ್ರ ಪೂರ್ಣ ಪ್ರಮಾಣದ ಅಂಗನವಾಡಿ ಕೇಂದ್ರ ಪರಿವರ್ತನೆ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಸಲು ಭರವಸೆ ನೀಡಿದ್ದಾರೆ. ಆದಕ್ಕಾರಣ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲಾಗುವುದು. ಧರಣಿ ಮುಂದೂಡಲಾಗಿದೆ ಎಂದು ರಾಜ್ಯಧ್ಯಕ್ಷ ಶಾಂತಾ ಘಂಟೆ, ಅಧ್ಯಕ್ಷ ಗೌರಮ್ಮ ಪಾಟೀಲ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.