ಇಂದು ಪ್ರತಿಭಟನೆ
ಗುಲ್ಬರ್ಗ: ಅಂಗನವಾಡಿ ನೌಕರರ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಫೆ.12 ರಂದು ಬೆ.12ಕ್ಕೆ ರೈಲು ನಿಲ್ದಾಣದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳ ಮನವಿ ಸಲ್ಲಿಸಲಾಗುವುದು. ಪ್ರತಿಭಟನಾ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಮತ್ತು ರಾಜ್ಯ ಕಾರ್ಯದರ್ಶಿ ರಮಾ ಟಿ.ಸಿ. ಮಾತನಾಡಲಿದ್ದಾರೆಂದು ಜಿಲ್ಲಾಧ್ಯಕ್ಷ ಡಿ. ಉಮಾದೇವಿ ತಿಳಿಸಿದ್ದಾರೆ.