ಅಪಘಾತ; ಮೂವರ ಸಾವು
ಗುಲ್ಬರ್ಗ: ನಗರದಿಂದ 15 ಕಿ.ಮೀ. ದೂರದಲ್ಲಿರುವ ಮರತೂರು(ನಂದೂರು) ಗ್ರಾಮದ ಬಳಿ ಟಿಪ್ಪರ್ ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಕ್ರೂಸರ್ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವನ್ನಪ್ಪಿದ್ದು, ಇನ್ನೂ ಐವರಿಗೆ ತೀವ್ರ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇವರೆಲ್ಲರೂ ಮೂಲತಃ ಶಹಾಬಾದಿನ ಹತ್ತಿರ ಶಂಕರವಾಡಿ ಗ್ರಾಮಸ್ಥರು. ಮುಗಳನಾಗಾಂವ್ ಮಠಕ್ಕೆ ಹೋಗಿ ಪಾದಯಾತ್ರೆ ಹರಕೆ ಒಪ್ಪಿಸಿ ತಮ್ಮೂರಿಗೆ ಮರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳು ಗುಲ್ಬರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.