ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕಮರವಾಡಿ ಗ್ರಾಪಂಗೆ ಮೂಲ ಸೌಕರ್ಯ ಕಲ್ಪಿಸಿ

Mainashree
Updated On : 17 Feb 2014, 10:51 am

ಶಹಾಬಾದ್: ಬಳಿಯ ಕಮರವಾಡಿ, ಸೂಲಹಳ್ಳಿ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಗ್ರಾಮ ಪಂಚಾಯ್ತಿಗೆ ತೆರಳಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ರಹಿಮಾನ್ಸಾಬ್ ಬಾಂಬೆ ಮಾತನಾಡಿ, ಗ್ರಾಪಂ ಅಧಿಕಾರಿಗಳ, ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಚರಂಡಿಗಳು ಸ್ವಚ್ಛತೆ ಕಾಣದೆ ದುರ್ಗಂಧ ಹರಡುತ್ತಿದೆ. ಈ ಗ್ರಾಮಗಳಲ್ಲಿ ಸಮರ್ಪಕ ಕುಡಿವ ನೀರು, ಮಹಿಳೆಯರಿಗೆ ಶೌಚಾಲಯ ಇಲ್ಲದೆ ಪರದಾಡುವಂತಾಗಿದೆ ಎಂದು ದೂರಿದರು.ಸೂಲಹಳ್ಳಿ, ಕಮರವಾಡಿ, ಅಲ್ಲೂರ, ಸರ್ಕಾರಿ ಸ್ಥಳದಲ್ಲಿ ವಾಸಮಾಡುತ್ತಿರುವ ದಲಿತರಿಗೆ ಹಕ್ಕು ಪತ್ರ ನೀಡಬೇಕು, ಕುಡಿವ ನೀರಿನ ಪೈಪ್ಲೈನ್ ನವೀಕರಿಸಿ, ಮಹಿಳೆಯರಿಗೆ ಶೌಚಾಲಯ ನಿರ್ಮಿಸಬೇಕು, ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಿಸಿ, ಅವೈಜ್ಞಾನಿಕವಾಗಿ ನಿರ್ಮಿಸಿದ ಚರಂಡಿಗಳನ್ನು ಸರಿಯಾಗಿ ನಿರ್ಮಿಸಿ, ಮುಚ್ಚಿದ ಚರಂಡಿಗಳನ್ನು ಸ್ವಚ್ಛಗೊಳಿಸಬೇಕೆಂದು ಮನವಿ ಸಲ್ಲಿಸಿದರು.
ಸದರಿ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಪಂ ಕಚೇರಿಯ ಮುಂದೆ ಧರಣಿ ನಡೆಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದರು. ಸೂಲಹಳ್ಳಿ ಗ್ರಾಮ ಘಟಕದ ಕರವೇ ಅಧ್ಯಕ್ಷ ರವಿ ಗುತ್ತೇದಾರ, ಗಣೇಶ ಗುತ್ತೇದಾರ, ಚಂದ್ರಪ್ಪ ಅಮಕಾರ್, ಲಾಲ ಹಮೀದ್ ಯರಗೋಳ, ಮಲ್ಲಪ್ಪ, ಹಾಜೀಸಾಬ್ ಸುಬೇದಾರ, ವೀರಭದ್ರಪ್ಪ ಕೋಟಗಾರ ಸೇರಿದಂತೆ ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement