ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮನವಿ

Mainashree
Updated On : 17 Feb 2014, 10:57 am

ಯಾದಗಿರಿ: ಜಿಲ್ಲೆಯಲ್ಲಿ ಪ್ರಮುಖ ರೇಲ್ವೆ ಗಾಡಿಗಳನ್ನು ನಿಲುಗಡೆ ಮಾಡುವಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರವೇ ತಾಲೂಕ ಘಟಕ ಕೇಂದ್ರ ರೇಲ್ವೆ ಹಾಗೂ ಸಾಮಾಜಿಕ ನ್ಯಾಯ ಸಬಲೀಕರಣ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಕರವೇ ತಾಲೂಕ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲು ವರ್ಕನಳ್ಳಿ, ಹೈ-ಕದ ಹರಿಕಾರರದ ತಾವುಗಳೂ ಈ ಭಾಗದ ಅಭಿವೃದ್ಧಿಗೆ 371(ಜೆ) ಕಲಂ ತಿದ್ದುಪಡಿ ತಂದು ಜನರ ಬಹುದಿನದ ಬೇಡಿಕೆಯನ್ನು ಈಡೇರಿಸಿದ್ದು, ಜಿಲ್ಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರೇಲ್ವೆ ಬೋಗಿ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಶೇ.80 ರಷ್ಟು ಜನರಿಗೆ ಉದ್ಯೋಗ ಕಲ್ಪಿಸಿಕೊಡಬೇಕು. ಭೂಮಿ ಕಳೆದುಕೊಂಡ ರೈತರ ಕುಟುಂಬದಲ್ಲಿ ಒಬ್ಬರಿಗೆ ನೌಕರಿ ನೀಡಬೇಕು, ಗುಲ್ಬರ್ಗದಿಂದ ಬೆಂಗಳೂರಿಗೆ ಇಂಟರ್‌ಸಿಟಿ ಪ್ಯಾಸಂಜರ್ ಗಾಡಿ ನಿತ್ಯ ಓಡಿಸಲು ಕ್ರಮ, ಜಿಲೆಯಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಮಾಡಬೇಕು, ಪ್ರಮುಖ ರೈಲುಗಳನ್ನು ಯಾದಗಿರಿಯಲ್ಲಿ ನಿಲುಗಡೆ ಮಾಡಬೇಕೆಂದು ಮನವಿ ಸಲ್ಲಿಸಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಭೀಮಾಶಂಕರ ಹತ್ತಿಕುಣಿ, ಮಹಾವೀರ ಲಿಂಗೇರಿ, ಶರಣು ಗುತ್ತೆದಾರ, ನಾಗಪ್ಪ ವರ್ಕನಳ್ಳಿ, ಮಲ್ಲಿಕಾರ್ಜುನ ವರ್ಕನಳ್ಳಿ ಇತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement