ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಗ್ರಾಪಂ ನೌಕರರ ಪ್ರತಿಭಟನೆ

Mainashree
Updated On : 18 Feb 2014, 11:49 am

ಸುರಪುರ: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಇಲ್ಲಿಯ ತಾಲೂಕು ಪಂಚಾಯತಿ ಕಾರ್ಯಾಲಯದ ಮುಂದೆ ಸೋಮವಾರ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಸಿಐಟಿಯು ಜಿಲ್ಲಾ ಸಮಿತಿ ಅಧ್ಯಕ್ಷೆ ಸುರೇಖಾ ಕುಲಕಣರ್ ಮಾತನಾಡಿ, ರಾಜ್ಯ ಸರ್ಕಾರವು ಗ್ರಾಪಂ ನೌಕರರಿಗೆ ಈಗಾಗಲೇ ಕನಿಷ್ಠ ವೇತನ, ತುಟ್ಟಿಭತ್ಯೆ, ಸೇವಾ ಪುಸ್ತಕ, ನೌಕರರ ಭವಿಷ್ಯ ನಿಧಿ, ಜನಶ್ರೀ ಯೋಜನೆ ಮತ್ತಿತರ ಸೌಲಭ್ಯಗಳನ್ನು ನೀಡಿದೆ. ಆದರೆ ಗ್ರಾಪಂನಲ್ಲಿ ನೌಕರರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳುತ್ತಿಲ್ಲ ಮತ್ತು ಸೂಕ್ತ ರೀತಿಯಲ್ಲಿ ವೇತನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅನೇಕ ವರ್ಷಗಳಿಂದ ನೌಕರರ ವೇತನ ಉಳಿಸಿಕೊಳ್ಳಲಾಗಿದೆ. ಆಹಾರ ಪದಾರ್ಥಗಳ ಬೆಲೆಗಳು ಏರಿಕೆಯಾಗಿದ್ದು ಗ್ರಾಪಂ ನೌಕರರಿಗೆ ಜೀವನ ನಡೆಸಲು ಕಷ್ಟವಾಗಿದೆ. ನೌಕರರ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಅವರ ವೇತನ ಬಿಡುಗಡೆ ಮಾಡಿ ಕುಟುಂಬ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಕೆಪಿಆರ್‌ಎಸ್‌ನ ತಾಲೂಕು ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಚಿನ್ನಾಕಾರ್ ಮಾತನಾಡಿ, ಸರ್ಕಾರ ಗ್ರಾಪಂ ನೌಕರರ ವಿರೋಧ ನೀತಿ ಅನುಸರಿಸುತ್ತಿದೆ ಎಂದು ಕಿಡಿ ಕಾರಿದರು. ಸರ್ಕಾರ ನಿಗದಿಪಡಿಸಿದ ವೇತನ ಜಾರಿಗೊಳಿಸಬೇಕು ಮತ್ತು ಬಾಕಿ ಇರುವ ವೇತನ ಪಾವತಿಸಬೇಕು. ಇಪಿಎಫ್ ಖಾತೆ ತೆರೆಯಬೇಕು. ಎಸ್ಸೆಸ್ಸೆಲ್ಸಿ ಪಾಸಾದ ಪಂಪ್ ಆಪರೇಟರ್‌ಗಳಿಗೆ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡಬೇಕು. ಗ್ರಾಪಂನಲ್ಲಿ ಅಕ್ರಮ ನೇಮಕಾತಿ ತಡೆಯಬೇಕು. ಬಿಲ್ ಕಲೆಕ್ಟರ್ ಹುದ್ದೆಯಿಂದ ಗ್ರೇಡ್-2 ಕಾರ್ಯದರ್ಶಿಹುದ್ದೆಗೆ ಬಡ್ತಿ ನೀಡಬೇಕು. ಎಲ್ಲ ಸಿಬ್ಬಂದಿಗೂ ಏಕಕಾಲಕ್ಕೆ ಅನುಮೋದನೆ ನೀಡಬೇಕು ಎಂದು ಬೇಡಿಕೆಗಳ ಮನವಿ ಪತ್ರವನ್ನು ತಾಪಂ ಅಧಿಕಾರಿಗೆ ಸಲ್ಲಿಸಿದರು. ಗ್ರಾಪಂ ನೌಕರರ ಸಂಘದ ತಾಲೂಕು ಅಧ್ಯಕ್ಷ ಚಿನ್ನಪ್ಪ ಬಂಡೋಳಿ, ಪ್ರಧಾನ ಕಾರ್ಯದರ್ಶಿ ಅಮೃತ ದೇಸಾಯಿ, ರಂಗಣ್ಣಗೌಡ, ಚಂದಮ್ಮ ವಜ್ಜಲ್ ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement