ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವೈದ್ಯರ ಬೇಜವಾಬ್ದಾರಿಗೆ ಖಂಡನೆ

Lingaraj Badiger
Updated On : 2 Jan 2014, 11:59 am

ಶಹಾಪುರ: ಆಕಸ್ಮಿಕ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ರೋಗಿಗಳ ಆರೋಗ್ಯ ವಿಚಾರಿಸಲು ಬಂದ ವಕೀಲರೊಬ್ಬರ ಜೊತೆ ವೈದ್ಯಾಧಿಕಾರಿ ದುರಾವರ್ತನೆಯಿಂದ ನಡೆದುಕೊಂಡಿದ್ದನ್ನು ಆಕ್ಷೇಪಿಸಿದ ಇಲ್ಲಿನ ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.
ತಾಲೂಕಿನ ಗೋಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿ ಈ ಲೋಪ ಎಸಗಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಕೂಡಲೇ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಸಂಘ ಮನವಿ ಮಾಡಿದೆ.
ಘಟನೆ ವಿವರ: ಇತ್ತೀಚೆಗೆ ನಡೆದ ಅಪಘಾತವೊಂದರಲ್ಲಿ ಗಾಯಗೊಂಡವರು ಇಲ್ಲಿನ ಆಸ್ಪತ್ರೆಗೆ ಬಂದಾಗ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದರು. ಅದೇ ಸಮಯಕ್ಕೆ ಆಸ್ಪತ್ರೆಗೆ ಆಗಮಿಸಿದ ತಾಪಂ ಸದಸ್ಯರು ಹಾಗೂ ಅಧ್ಯಕ್ಷರು ಸಾಮಾಜಿಕ ಸ್ಥಾಯಿ ಸಮಿತಿ ಇವರು, ಸದರಿ ಅಧಿಕಾರಿಗಳ ಹಾಜರಾತಿ ಪುಸ್ತಕ ಪರಿಶೀಲಿಸಿದಾಗ ಕಳೆದ ಮೂರು ದಿನದಿಂದ ವೈದ್ಯಾಧಿಕಾರಿಗಳು ಗೈರು ಹಾಜರಾಗಿದ್ದನ್ನು ಕಂಡು ಸದರಿ ಹಾಜರಿ ಪುಸ್ತಕದಲ್ಲಿ ವೈದ್ಯರ ಅಲಭ್ಯ ಕುರಿತು ನಮೂದಿಸಿದ್ದರು.
ಈ ಘಟನೆಗೆ ಕುರಿತು ವಕೀಲರಿಗೆ ರಾತ್ರಿ ವೇಳೆ ಫೋನ್ ಮಾಡಿ ಅಸಭ್ಯ ಮಾತುಗಳನ್ನಾಡಿದ ವೈದ್ಯರು, ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರಣ ಜಿಲ್ಲಾ ವೈದ್ಯಾಧಿಕಾರಿಗಳು ವೈದ್ಯರ ಬೇಜವಾಬ್ದಾರಿ ವರ್ತನೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಆರ್.ಎಂ. ಹೊನ್ನಾರಡ್ಡಿ, ಕಾರ್ಯದರ್ಶಿ ಕೆ.ಸಿ. ಆನೇಗುಂದಿ, ಎಂ.ಎಸ್. ರಾಂಪೂರೆ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement