ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಸರ್ಕಾರಿ ನೌಕರರಿಗೆ ಡಿಸಿ ಶುಭಾಶಯ

Lingaraj Badiger
Updated On : 2 Jan 2014, 11:59 am

ಯಾದಗಿರಿ: ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2014ರ ಹೊಸ ವರ್ಷದ ಶುಭಾಶಯ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ಹೊಸ ವರ್ಷದ ಶುಭಾಶಯ ತಿಳಿಸಿದರು.ಚುನಾವಣಾ ಶಾಖೆಯ ತಹಸೀಲ್ದಾರ್ ಮಲ್ಲಿಕಾರ್ಜುನ, ಲೆಕ್ಕಾಧಿಕಾರಿ ವೀರಣ್ಣ, ಪ್ರಥಮ ದರ್ಜೆ ಸಹಾಯಕ ಅಬ್ದುಲ ರೆಹಮಾನ, ಸಮಾಜ ಕಲ್ಯಾಣ ಅಧಿಕಾರಿ ರಾಮಣ್ಣಗೌಡ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಅಂಭಿಯತರ ಬಂಡೆಪ್ಪ ಆಕಳ ಮಾತನಾಡಿದರು.
ಉಚಿತ ಸೈಕಲ್ ವಿತರಣೆ
ಗುರುಮಠಕಲ್: ಇಲ್ಲಿನ ಶಾಂತವೀರ ಸ್ವಾಮಿ ಸ್ಮೃತಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದ ಪ್ರಾರಂಭೋತ್ಸಹ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು  ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರಾಯ್ಯ ಅಯ್ಯಾಳಪ್ಪನವರು ನೆರವೇರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಪ್ರಭು, ಎಂ.ಡಿ. ಹೊಸಮನಿ ಶಿಕ್ಷಣಾಧಿಕಾರಿ ಆಕ್ಷರ ದಾಸೋಹ ಯೋಜನೆ ಯಾದಗಿರಿ, ಪಟ್ಟಣ ಪಂಚಾಯತಿ ಸದಸ್ಯರಾದ ದೇವದಾಸ, ನಾರಾಯಣ ರಡ್ಡಿ ಪಾಟೀಲ್, ಡಾ. ಚಂದುಲಾಲ್ ಹರ್ಷದ್, ಸೋಮನಾಥ ಸ್ವಾಮಿ ಸೇರಿದಂತೆ ಇತರರು ಇದ್ದಾರು.
ರಸ್ತೆ ಕಾಮಗಾರಿಗೆ   ಪುನಾರಂಭಿಸಿ
ಸುರಪುರ: ತಾಲೂಕಿನ ಪೇಠ ಅಮ್ಮಾಪುರ ಗ್ರಾಮದಿಂದ ಮುದ್ನೂರ ಕ್ರಾಸ್ವರೆಗೆ ರಸ್ತೆ ಕಾಮಗಾರಿಯನ್ನು ಪುನಾರಾರಂಭಿಸಬೇಕು ಎಂದು ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಜಿಲ್ಲಾ ಮತ್ತು ತಾಲೂಕು ಘಟಕಗಳು ಪಿಡಬ್ಲ್ಯೂಡಿ ಇಇಗೆ ಒತ್ತಾಯಿಸಿವೆ. ಈ ರಸ್ತೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಬಸ್ಸಂಚಾರ ಸ್ಥಗಿತಗೊಂಡಿದ್ದು ನಾಗರಿಕರು ಗ್ರಾಮ ತಲುಪಲು ಹರಸಾಹಸ ಪಡುವಂತಾಗಿದೆ. ಕಾರಣ ಸಂಚಾರ ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸೇನೆಯ ಜಿಲ್ಲಾಧ್ಯಕ್ಷ ರಾಜೂ ಕುಂಬಾರ, ತಾಲೂಕು ಘಟಕದ ಅಧ್ಯಕ್ಷ ಮರೆಪ್ಪ ಹವಲ್ದಾರ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement