ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಇಂದು ಮುಖ್ಯಗುರುಗಳ ಸಭೆ

Lingaraj Badiger
Updated On : 6 Jan 2014, 11:11 am

ಗುಲ್ಬರ್ಗ: ಪೂರ್ವ ಪ್ರಾಥಮಿಕ ಅಥವಾ 1ನೇ ತರಗತಿಗೆ ದಾಖಲಾತಿ ಮಾಡುವಾಗ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ 2009ರ ಪ್ರಕಾರ ಅನಾನುಕೂಲ ಪರಿಸ್ಥಿತಿಯಲ್ಲಿರುವ ಮತ್ತು ದುರ್ಬಲ ವರ್ಗದ ಮಕ್ಕಳಿಗೆ ಮೀಸಲಿಡಬೇಕಾದ ಶೇಕಡಾ 25ರಷ್ಟು ಸೀಟುಗಳ ಮಾಹಿತಿಯನ್ನು ತಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಪ್ರಕಟ ಪಡಿಸಲು ತಾಲೂಕಿನ ಎಲ್ಲಾ ಅನುದಾನರಹಿತ ಪ್ರಾಥಮಿಕ ಶಾಲಾ ಮುಖ್ಯಗುರುಗಳ ಸಭೆಯನ್ನು ಜ.6ರಂದು ಕರೆಯಲಾಗಿದೆ ಎಂದು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದರು.
ಸಿಬಿಎಸ್‌ಸಿಐಸಿಎಸ್‌ಇ ಪಠ್ಯಕ್ರಮ ಅನುಸರಿಸುವ ಶಾಲೆಗಳೂ ಸೇರಿದಂತೆ ಎಲ್ಲಾ ಅನುದಾನರಹಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಅಥವಾ 1ನೇ ತರಗತಿಯಲ್ಲಿ ಅನಾನುಕೂಲ ಪರಿಸ್ಥಿತಿಯಲ್ಲಿರುವ ಮತ್ತು ದುರ್ಬಲ ವರ್ಗದ ಮಕ್ಕಳಿಗೆ ಶೇ.25 ಸೀಟುಗಳ ದಾಖಲಾತಿಯಾಗಿ ಪಾಲಕರು ಅರ್ಜಿ ಸಲ್ಲಿಸಬಹುದು. ಮಕ್ಕಳ ಆದಾಯ ಮಿತಿ 3.50 ಲಕ್ಷದವರೆಗೆ ವಾರ್ಷಿಕ ಆದಾಯ ಹೊಂದಿದವರು ಅರ್ಜಿ ಸಲ್ಲಿಸಬಹುದು.
ನಿಗದಿಪಡಿಸಲಾದ ದಾಖಲಾತಿ ಅರ್ಜಿ ನಮೂನೆಗಳು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳು, ಜಿಲ್ಲಾ ಉಪನಿರ್ದೇಶಕರ ಕಚೇರಿ ಹಾಗೂ ಸಂಬಂಧಪಟ್ಟ ಶಾಲೆಗಳಲ್ಲಿಯೂ ಲಭ್ಯವಿರುತ್ತದೆ. ಅರ್ಜಿ ನಮೂನೆಯು ವೆಬ್‌ಸೈಟ್ ಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ರಲ್ಲಿಯೂ ಲಭ್ಯವಿರುತ್ತದೆ. ಈ ಅರ್ಜಿ ನಮೂನೆಗೆ ಯಾವುದೇ ಶುಲ್ಕವಿರುವುದಿಲ್ಲ.
ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿ ಶಾಲೆಯಲ್ಲಿ ಲಭ್ಯವರಿರುವ ಶೇ.25 ಸೀಟುಗಳನ್ನು ಜ.6 ರಂದು ಪ್ರಕಟಿಸಲಾಗುವುದು. ಜ.7 ರಿಂದ ಫೆಬ್ರವರಿ 8ರವರೆಗೆ ಅರ್ಜಿಗಳನ್ನು ಸಲ್ಲಿಸಲು ನಿಗಧಿಪಡಿಸಲಾಗಿದೆ. ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಪಟ್ಟಿಯನ್ನು ಶಾಲೆಯವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಫೆಬ್ರವರಿ 17ರಂದು ಸಲ್ಲಿಸಬೇಕು. ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಶಾಲೆಗಳಿಗೆ ಫೆಬ್ರವರಿ 28 ರಂದು ಕಳಿಸಲಾಗುವುದು. ಮಾರ್ಚ್ 3ರಿಂದ ಶಾಲೆಗಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement