ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ
ಹುಣಸಗಿ: ಸಮೀಪದ ಗುಂಡಲಗೇರಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿಶೇಷ ಉಪನ್ಯಾಸ ನೀಡಿದ ಉಪನ್ಯಾಸಕ ದಯಾನಂದ ಮಠ, ಇತ್ತೀಚಿನ ದಿನಗಳಲ್ಲಿ ವ್ಯಾಪಾರ, ಶಿಕ್ಷಣ ಪ್ರತಿಯೊಂದರಲ್ಲಿಯೂ ಪೈಪೋಟಿ ಇದ್ದು, ಈಗಿನಿಂದಲೇ ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಗೆ ಅನುಗುಣವಾಗಿ ವೃತ್ತಿ ಆಯ್ಕೆ ಮಾಡಿಕೊಂಡಾಗ ಯಶಸ್ವಿಯಾಗಲು ಸಾಧ್ಯ ಎಂದರು. ಶಾಲೆಯ ಮುಖ್ಯ ಶಿಕ್ಷಕ ಯಲ್ಲಪ್ಪ ಚಂದನಕೇರಿ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಸವರಾಜ ಹಿರೇಮಠ, ದುರ್ಗಪ್ಪ, ಅಬ್ದುಲ್ ಖಯಾಮ್, ಜಗದೀಶ, ಮಲ್ಲಪ್ಪ, ಪ್ರಕಾಶ ಸೇರಿದಂತೆ ಇತರರು ಇದ್ದರು.