ಇಂದು ಕೋಲಿ ಸಭೆ
ಗುಲ್ಬರ್ಗ: ನಗರದ ಐವಾನ್-ಇ-ಶಾಹಿ ಅತಿಥಿಗೃಹದಲ್ಲಿ ಜ.7ರಂದು ಬೆ.11ಕ್ಕೆ ಫೆಬ್ರವರಿಯಲ್ಲಿ ನಡೆಯುವ ರಾಜ್ಯಮಟ್ಟದ ಪ್ರಥಮ ಸಾಂಸ್ಕೃತಿ ಸಾಹಿತ್ಯ ಸಮ್ಮೇಳನ ಕುರಿತು ಚರ್ಚಿಸಲು ಕರ್ನಾಟಕ ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಸಮಾಜ ಅಧ್ಯಯನ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಸಮಾಜದ ವಿವಿಧ ಸಂಘಟನೆಗಳು ಪದಾಧಿಕಾರಿಗಳು ಹಾಗೂ ಮುಖಂಡರುಗಳ ವಿಭಾಗ ಮಟ್ಟದ ಸಭೆ ಕರೆಯಲಾಗಿದೆ. ಸ್ವಾಗತ ಸಮಿತಿ ಅಧ್ಯಕ್ಷ ಮತ್ತು ಒಳನಾಡು ಬಂದರು ಜಲಸಾರಿಗೆ ಮತ್ತು ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರ ಅಧ್ಯಕ್ಷತೆ ವಹಿಸುವರು ಎಂದು ಅಧ್ಯಕ್ಷ ಅವ್ವಣ್ಣ ಮ್ಯಾಕೇರಿ, ಉಪಾಧ್ಯಕ್ಷ ಭೀಮಣ್ಣ ಸಾಲಿ ತಿಳಿಸಿದ್ದಾರೆ.
ವಾಸ್ತು ಉದ್ಘಾಟನೆ
ಗುಲ್ಬರ್ಗ: ಮಹಾರಾಷ್ಟ್ರದ ತುಳಜಾಪುರದಲ್ಲಿ ಹೈದ್ರಾಬಾದ್ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜ ಕಲ್ಯಾಣ ಮಂಟಪದ ವಾಸ್ತು ಉದ್ಘಾಟನೆ ಸಮಾರಂಭವ ನಡೆಯಿತು. ಸಮಾರಂಭದಲ್ಲಿ ಉಮರ್ಗಾ ಶಾಸಕ ಜ್ಞಾನರಾಜ, ಜಾಗೃತಿ ಸಮಾಜದ ಗುರುಮಾತಾ ನಂದಾತಾಯಿ, ಹೈದ್ರಾಬಾದ್ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜದ ಅಧ್ಯಕ್ಷ ಸಾಯಬಣ್ಣ ಹೋಳ್ಕರ, ಉಪಾಧ್ಯಕ್ಷ ಲಿಂಗೋಜಿ ಗಾಜರೆ, ಸದಸ್ಯರಾದ ಅನಿಲ್ ಕಾವಳೆ, ಗಣೇಶ ಕಾವಳೆ, ಖಾಜೇಂದ್ರ ಮಹಾವರಕರ್, ಅರ್ಜುನ ಸೋನಕವಡೆ, ಮಲ್ಲಿಕಾರ್ಜುನ ಖರಟಮಲ್, ಶ್ರೀಮಂತ ಇಂಗಳೆ, ಬಾಬುರಾವ್ ಕಟಕೆ ಇನ್ನಿತರರು ಇದ್ದರು.
12ಕ್ಕೆ ಸಮಾವೇಶ
ಗುಲ್ಬರ್ಗ: ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ದಶಮಾನೋತ್ಸವ ಮತ್ತು ಜಾಗೃತಿ ಸಮಾವೇಶ ಜ.12ರಂದು ಬೆ.11ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಶಮಾನೋತ್ಸವ ಹಾಗೂ ಜನಜಾಗೃತಿ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಚ್. ಆಂಜನೇಯ ಈ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಘಟಕಕ್ಕೆ ನೇಮಕ
ಗುಲ್ಬರ್ಗ: ನಗರದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಗುಲ್ಬರ್ಗ ವಿಭಾಗ ಮಟ್ಟದ ಕಾರ್ಯಕರ್ತರ ಸಭೆ ಮತ್ತು ನೂತನ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಹಾಗೂ ರಾಜ್ಯ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರನ್ನಾಗಿ ಸೈಯದ್ ಮಂಜೂರ ಉಲ್ ಹಸನ್ ಅವರನ್ನು ನೇಮಕ ಮಾಡಲಾಯಿತು ಎಂದು ರಾಜ್ಯಧ್ಯಕ್ಷ ಹೊಸಮನಿ ತಿಳಿಸಿದರು.
ವಾರ್ಷಿಕೋತ್ಸವ
ಗುಲ್ಬರ್ಗ: ನಗರದ ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಶಾಲಾ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಸಂಸ್ಥೆಯ ಅಧ್ಯಕ್ಷ ಲಕ್ಷ್ಮೀಕಾಂತ ನೂಲಾ ಅದ್ಯಕ್ಷತೆ ವಹಿಸಿದ್ದರು. ಗುಲ್ಬರ್ಗ ಉತ್ತರ ವಲಯ ಬಿಇಒ ಭರತರಾಜ ಸಾವಳಗಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.