'ತೀರ್ಮಾನ ಬೆಂಬಲಿಸಿ ಬಿಜೆಪಿ ಸೇರ್ಪಡೆ'
ಗುರುಮಠಕಲ್: ರಾಜ್ಯ ಹಾಗೂ ದೇಶದ ಹಿತದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಪಕ್ಷದಲ್ಲಿ ಕೆಜೆಪಿ ವಿಲೀನಗೊಳಿಸುವ ನಿರ್ಧಾರವನ್ನು ನಾವೆಲ್ಲರೂ ಬೆಂಬಲಿಸಿ ಬಿಜೆಪಿಗೆ ಸೇರ್ಪಡೆಯಾಗಲು ತಿರ್ಮಾನಿಸಿದ್ದೇವೆ ಎಂದು ಮಾಜಿ ಶಾಸಕ, ಕೆಜೆಪಿ ಮುಖಂಡ ಡಾ. ವೀರಬಸವಂತರಡ್ಡಿ ಮುದ್ನಾಳ ಹೇಳಿದರು.
ಗುರುಮಠಕಲ್ ಹಾಗೂ ಯಾದಗಿರಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಭೆ ನಂತರ ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿಎಸ್ವೈ ಅವರು ಯಾದಗಿರಿ ಜಿಲ್ಲೆಯಾಗಲು ಹಾಗೂ ಅಭಿವೃದ್ಧಿಗೆ ಪ್ರಮುಖರು ಎಂದರು.
ಜಿಲ್ಲೆಯ ಶಹಾಪುರ ಶಾಸಕ ಗುರು ಪಾಟೀಲ್ ಅವರು ಕೂಡ ಬಿಜೆಪಿ ಸೇರ್ಪಡೆಯಾಗುವ ವಿಷಯದಲ್ಲಿ ಸ್ವಲ್ಪ ಮಟ್ಟಿಗೆ ಗೊಂದಲದಲ್ಲಿದ್ದಾರೆ. ಅವರು ಕೂಡ ಬಿಜೆಪಿ ಸೇರ್ಪಡಯಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಮುಖಂಡ ವೆಂಕಟರಡ್ಡಿ ಮುದ್ನಾಳ ಮಾತನಾಡಿ, ನಾನು ಕೆಜೆಪಿ ಪಕ್ಷಕ್ಕೆ ಸೇರ್ಪಡೆ ನಿರ್ಧಾರವನ್ನು ಜೆಡಿಎಸ್ ಮುಖಂಡರು ಟೀಕಿಸಿರುವದಕ್ಕೆ ಅವರ್ಯಾರು ಎಂದು ತರಾಟೆಗೆ ತೆಗೆದುಕೊಂಡರು.