ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಗೋದುತಾಯಿ ಮಹಿಳಾ ವಿದ್ಯಾಲಯಕ್ಕೆ 3ನೇ ರ್ಯಾಂಕ್

Rashmi Kasaragodu
Updated On : 12 Jan 2014, 1:06 am

ಗುಲ್ಬರ್ಗ: ಬಿಜಾಪುರದಲ್ಲಿರುವ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ 2013- 14ನೇ ಸಾಲಿನಲ್ಲಿ ನಡೆದ ವಾಣಿಜ್ಯ ಪದವಿಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಅಶ್ವಿನಿ ಬಿಜಾಸ್ಪೂರ ಮೂರನೇ ರ್ಯಾಂಕ್ ಪಡೆದಿದ್ದಾರೆ. ಮಹಾವಿದ್ಯಾಲಯದ ಕಲಾ ವಿಭಾಗದಲ್ಲಿ ಸುಮಾರು 73 ವಿದ್ಯಾರ್ಥಿನಿಯರು ಮತ್ತು ವಾಣಿಜ್ಯ ವಿಭಾಗದ 77 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ ಪಡೆದಿದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಶರಣಬಸವಪ್ಪ ಅಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ನೀಲಾಂಬಿಕಾ ಪೊಲೀಸ್ಪಾಟೀಲ, ಶಿಕ್ಷಕ ಮತ್ತು ಶಿಕ್ಷಕೇತ ಸಿಬ್ಬಂದಿಗಳು ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement