ಪೂರ್ವಭಾವಿ ಸಭೆ
ಸುರಪುರ: ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಸರ್ಕಾರದ ವತಿಯಿಂದ ಜ. 13ರಂದು ಆಚರಿಸಲು ಸರ್ಕಾರ ನಿರ್ದೇಶನ ನೀಡಿದೆ. ಜಯಂತಿಯನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ತಹಸೀಲ್ದಾರ್ ಅರುಣಕುಮಾರ ಕುಲಕಣರ್ ಹೇಳಿದರು. ಇಲ್ಲಿಯ ತಹಸೀಲ್ದಾರ್ ಕಚೇರಿಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವದ ಅಂಗವಾಗಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಪನ್ಯಾಸ: ಶರಣರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ನಿವೃತ್ತ ಪ್ರಾಚಾರ್ಯ ರಾಮಣ್ಣ ಲಸ್ಕರೆ ಅವರಿಂದ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ತಹಸೀಲ್ದಾರ್ ಹೇಳಿದರು. ಅಧಿಕಾರಿಗಳಾದ ಧೇನುಸಿಂಗ್ ಚವ್ಹಾಣ, ತುಳಜಾ ನಾಯಕ, ಜೀವನಕುಮಾರ, ಕೆ.ಸಿ. ಚವ್ಹಾಣ, ಬಸವರಾಜ, ಶಿವಮೂರ್ತಿ, ಮಾಪಣ್ಣ, ಪ್ರಾಚಾರ್ಯ ಎನ್.ಆರ್, ಕುಲಕರ್ಣಿ, ಮುಖಂಡರಾದ ಖಾಜಾ ಪಟೇಲ ಕೆಂಭಾವಿ, ಯಲ್ಲಪ್ಪ ಹುಲಕಲ್, ಆನಂದ ಅಮ್ಮಾಪೂರ, ನಾಗರಾಜ ವಡಗೇರಿ, ನಾಗಪ್ಪ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ, ಹಣಮಂತ ಮಕಾಶಿ ಇತರರು ಸಭೆಯಲ್ಲಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.