ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ಅಧಿಕಾರಿಗಳು
ಗುಲ್ಬರ್ಗ: ಪರಿಸರ ಮತ್ತು ಅರಣ್ಯ ಇಲಾಖೆ ಜಾರಿಗೆ ತಂದಿರುವ ಪ್ಲಾಸ್ಟಿಕ್ ತ್ಯಾಜ್ಯ(ವ್ಯವಸ್ಥಾಪನೆ ಮತ್ತು ನಿರ್ವಹಣೆ) ನಿಯಮಗಳು- 2011 ಪರಿಣಾಮಕಾರಿ ಅನುಷ್ಠಾನಕ್ಕೆ ಮಹಾನಗರ ಪಾಲಿಕೆಯು ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು ಪಾಲಿಕೆ ಆಯುಕ್ತರು ಸಮಿತಿ ಅಧ್ಯಕ್ಷರು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಉಪ ಪೊಲೀಸ್ ವರಿಷ್ಠಾಧಿಕಾರಿ, ಬಿಇಒ, ಕೆಬಿಎನ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು, ಹೈ-ಕ ಪರಿಸರ ಜಾಗೃತಿ ಮತ್ತು ಸಂರಕ್ಷಣಾ ಸಂಘಟನೆ ಅಧ್ಯಕ್ಷರು, ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಅಧ್ಯಕ್ಷರು ಸದಸ್ಯರಾಗಿರುತ್ತಾರೆ. ಪಾಲಿಕೆಯ ಆರೋಗ್ಯಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಾರೆ. ಸಮಿತಿಯಲ್ಲಿ ಹೆಚ್ಚುವರಿ ಸದಸ್ಯರನ್ನು ಸೇರಿಸುವ ಹಾಗೂ ಸಮಿತಿ ಪುನಾರಚನೆ ಅಧಿಕಾರ ಗುಲ್ಬರ್ಗ ಆಯುಕ್ತರಿಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 40 ಮೈಕ್ರಾನ್ಗಿಂತ ಕಡಿಮೆ ದಪ್ಪವಿರುವ ಪ್ಲಾಸ್ಟಿಕ್ ಚೀಲಗಳ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.