ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಇಂದು
ಚಿತ್ತಾಪುರ: ತಾಲೂಕಾಡಳಿತ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಜ.13ರಂದು ಆಚರಿಸಲಾಗುವುದು ಎಂದು ತಹಸೀಲ್ದಾರ್ ಮಲ್ಲೇಶ ತಂಗಾ ಹೇಳಿದರು. ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರವು ಈ ವರ್ಷದಿಂದ ಜಯಂತಿ ಆಚರಣೆ ಮಾಡಲು ನಿದೇಶನ ನೀಡಿದ್ದು, ಅದರ ನಿಮಿತ್ತ ಬೆ.9 ಗಂಟೆಗೆ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಆಗಮಿಸಿ ತಹಸೀಲ್ದಾರ್ ಕಚೇರಿಯಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದರು. ಅದೇ ರೀತಿ ಗ್ರಾಪಂ ಕಚೇರಿಯಲ್ಲೂ ಜಯಂತಿ ಅಚರಿಸಲು ಸೂಚಿಸಿದರು.