ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಜಾತ್ರೆಯಲ್ಲಿ ಭಕ್ತರಿಂದ 400 ಕುರಿ ವಶಕ್ಕೆ

Rashmi Kasaragodu
Updated On : 14 Jan 2014, 11:49 am

ಯಾದಗಿರಿ: ಹೈ-ಕದ ಪ್ರಸಿದ್ದ ಧಾರ್ಮಿಕ ಕ್ಷೇತ್ರ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆ ಮಂಗಳವಾರದಿಂದ ಆರಂಭವಾಗಲಿದ್ದು, ಜಾತ್ರೆಗೆ ಆಗಮಿಸಿದ ಭಕ್ತರಿಂದ ಸುಮಾರು 400 ಕುರಿಗಳನ್ನು ಜಿಲ್ಲಾಡಳಿತ ವಶಕ್ಕೆ ತೆಗೆದುಕೊಂಡಿದೆ. ಈ ಹಿಂದೆ ಜಾತ್ರೆ ಸಮಯದಲ್ಲಿ ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ನಾನಾ ಭಾಗಗಳಿಂದ ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರು ಮಲ್ಲಯ್ಯ ಗಂಗಾ ಸ್ಥಳಕ್ಕೆ ಮೆರವಣಿಗೆ ಮೂಲಕ ಪಲ್ಲಕ್ಕಿಯಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಪಲ್ಲಕ್ಕಿ ಮೇಲೆ ಭಕ್ತರು ಕುರಿ ಹಾರಿಸುವ ಮೂಲಕ ತಮ್ಮ ಹರಕೆ ಅರ್ಪಿಸುತ್ತಿದ್ದರು.
ಪ್ರಾಣಿ ಹಿಂಸೆ ತಡೆವ ನಿಟ್ಟಿನಲ್ಲಿ ಕಳೆದ ವರ್ಷದಿಂದ ಜಿಲ್ಲಾಡಳಿತ ಕುರಿ ಹಾರಿಸುವುದನ್ನು ನಿಷೇದಿಸಿದೆ. ಜಾತ್ರೆಗೆ ತಂದಂತಹ ಕುರಿಗಳನ್ನು ವಶಕ್ಕೆ ತೆಗೆದುಕೊಂಡು ನಂತರ ಹರಾಜು ಮೂಲಕ ಮಾರಾಟ ಮಾಡಲಾಗುತ್ತಿದೆ. ಗ್ರಾಮದ ಪ್ರಮುಖ ಧ್ವಾರಗಳಲ್ಲಿ ಜಿಲ್ಲಾಡಳಿತ ಹಲವಾರು ಚೆಕ್ಪೋಸ್ಟ್ ಸ್ಥಾಪಿಸಿ ಪೊಲೀಸ್, ಕಂದಾಯ ಅಧಿಕಾರಿಗಳು, ಪಶುಸಂಗೋಪನೆ ಇಲಾಖೆ ಸಿಬ್ಬಂದಿ ನೇಮಿಸಿ ಭಕ್ತರನ್ನು ತಪಾಸಣೆ ಮಾಡಿ 400 ಕುರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆಂದು ದೇವಸ್ಥಾನದ ಶಿವಾನಂದ ಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement