ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಇಂದು ಕಾರ್ಯಾಗಾರ

Rashmi Kasaragodu
Updated On : 17 Jan 2014, 12:03 pm

ಗುಲ್ಬರ್ಗ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಜಿಲ್ಲಾ ಘಟಕದ ಮೂರನೇ ವಾರ್ಷಿಕೋತ್ಸವ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ , ಚಿಗುರು ಪ್ರಶಸ್ತಿ, ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರಿಗಾಗಿ ಕೆ.ಸಿ.ಎಸ್.ಆರ್ ಶೈಕ್ಷಣಿಕ ಕಾರ್ಯಾಗಾರ ಕಾರ್ಯಕ್ರಮ ಇಲ್ಲಿನ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಜ.17 ರಂದು ನಡೆಯಲಿದೆ. ಡಿಸಿ ಡಾ. ಎ.ಎನ್. ಪ್ರಸಾದ  ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಶಶೀಲ್ ನಮೋಶಿ ಅಧ್ಯಕ್ಷತೆ ವಹಿಸುವರು. ರಾಧಾಕೃಷ್ಣರಾವ ಮದನಕರ್ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ. ಡಿಡಿಪಿಐ, ಜಿಪಂ, ಸಿಇಓ, ಪಪೂ ಇಲಾಖೆ ಉಪನಿರ್ದೇಶಕರು ಇನ್ನಿತರರು ಭಾಗವಹಿಸಲಿದ್ದಾರೆ.
ಯುವಜನೋತ್ಸವ
ಗುಲ್ಬರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗುಲ್ಬರ್ಗ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕೋಶದ ಸಂಯುಕ್ತಾಶ್ರಯದಲ್ಲಿ ಜನವರಿ 18 ರಿಂದ 22 ರವರೆಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಮಹಾತ್ಮಾಗಾಂಧಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆ ಯುವಜನೋತ್ಸವ-2014 ಜರುಗಲಿದೆ. ಜ.18 ರಂದು ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಯುವಜನೋತ್ಸವ ಉದ್ಘಾಟಿಸುವರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಡಾ. ಎನ್. ನಾಗಾಂಬಿಕಾ ದೇವಿ, ಡಾ. ಕಿ. ಬಿ. ಧನಂಜಯ, ಸುಭಾಷ ರಾಠೋಡ, ಶಾಂತಲಿಂಗ ಸಾವಳಗಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಗುಲ್ಪರ್ಗ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಈ.ಟಿ. ಪುಟ್ಟಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಶಾಂತಪ್ಪ ನಿಧನ
ಕೆಂಭಾವಿ: ಪಟ್ಟಣದ ಹೋಟೆಲ್ ಉದ್ಯಮಿ ಶಾಂತಪ್ಪ ಆಶಿಂಗಾಳ (50) ಬುಧವಾರ ಬೆಳಿಗ್ಗೆ ನಿಧನರಾದರು. ಮೃತರಿಗೆ ಪತ್ನಿ, ಒಬ್ಬ ಗಂಡು, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಪಟ್ಟಣದಲ್ಲಿ ಗುರುವಾರ ಸಂಜೆ ನೆರವೇರಿತು. ಶಾಂತಪ್ಪ ಅವರ ನಿಧನಕ್ಕೆ ಶಾಸಕ ಗುರು ಪಾಟೀಲ, ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಜಿಪಂ ಸದಸ್ಯ ಸಿದ್ದನಗೌಡ ಪೊಲೀಸ್ ಪಾಟೀಲ, ತಾಪಂ ಸದಸ್ಯರಾದ ಖಾಜಾಪಟೇಲ ಕಾಚೂರ, ಅನ್ನಪೂರ್ಣ ಮಾಲಿಪಾಟೀಲ, ಜಿಪಂ ಮಾಜಿ ಸದಸ್ಯ ಲಿಂಗನಗೌಡ ಮಾಲಿಪಾಟೀಲ, ಎಪಿಎಂಸಿ ಸದಸ್ಯ ವಾಮನರಾವ್ ದೇಶಪಾಂಡೆ, ಉದ್ಯಮಿ ಅಶೋಕ ಸೊನ್ನದ, ಶರಣಬಸ್ಸು ಡಿಗ್ಗಾವಿ ಶೋಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments