ತನಿಖೆಗೆ ಕರವೇ ಆಗ್ರಹ
ಕೆಂಭಾವಿ: ಹಂತಕನ ಗುಂಡಿಗೆ ಬಲಿಯಾದ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಸಾವಿಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕರವೇಆರೋಪಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಕರವೇ ಕೆಂಭಾವಿ ಹೋಬಳಿ ಘಟಕದ ಉಪಾಧ್ಯಕ್ಷ ರವಿರಾಜ ಕಂದಳ್ಳಿ ಹಾಗೂ ಕರವೇ ಮುಖಂಡ ಮಲ್ಲಿಕಾರ್ಜುನ ಸ್ವಾಮಿ, ಇದು ಪೊಲೀಸ್ ಇಲಾಖೆ ವೈಫಲ್ಯವನ್ನು ತೋರಿಸುತ್ತದೆ. ಐಜಿಪಿ ಮತ್ತು ಎಸ್ಪಿ ವಿರುದ್ಧ ತನಿಖೆ ನಡೆಸಬೇಕು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದಿದ್ದಾರೆ.