ಚಿಂಚೋಳಿಯಲ್ಲಿ ಪಲ್ಸ್ ಪೋಲಿಯೋ
ಚಿಂಚೋಳಿ: ಜ. 19ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ 5 ವರ್ಷದೊಳಗಿನ ಒಟ್ಟು 35246 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಕುಲಕರ್ಮಿ ತಿಳಿಸಿದ್ದಾರೆ. ತಾಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ತಾಲೂಕ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನಲ್ಲಿ 162 ಬೂತ್ ತೆರೆಯಲಾಗಿದೆ. ಜನನಿಬಿಡ ಪ್ರದೇಶದಲ್ಲಿ 163 ಸಂಚಾರಿ ಬೂತ್ ಪ್ರಾರಂಭಿಸಲಾಗಿದೆ. ರಾಷ್ಟ್ರಿಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ತಾಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶದ ಒಟ್ಟು 50887 ಮನೆಗಳಿಗೆ ಭೇಟಿ ನೀಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರು, 213 ಆಶಾ ಕಾರ್ಯಕರ್ತೆಯರು ಮತ್ತು ಇಲಾಖೆಯ ಆರೋಗ್ಯ ಸಹಾಯಕಿ ಸಹಾಯಕ ಒಟ್ಟು 50, 36 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಕುಲಕರ್ಣಿ ತಿಳಿಸಿದರು.