'ಜೇವರ್ಗಿ ತಾಲೂಕಿನ ರಸ್ತೆ ಅಭಿವೃದ್ಧಿಗೆ ರು. 16 ಕೋಟಿ'
ಜೇವರ್ಗಿ: ತಾಲೂಕಿನ ವಿವಿಧ ಲೋಕೋಪಯೋಗಿ ಇಲಾಖೆಯ ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರದಿಂದ ರು. 16 ಕೋಟಿ ಅನುದಾನ ಮಂಜೂರು ಮಾಡಿಸಲಾಗಿದೆ. ಮುಂಬರುವ ದಿನಗಳಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದೆಂದು ಶಾಸಕ ಡಾ.ಅಜಯಸಿಂಗ್ ಆಂದೋಲಾ ಗ್ರಾಮದಲ್ಲಿ ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹೇಳಿದ್ದಾರೆ. ಆಂದೋಲಾ ಗ್ರಾಮದಲ್ಲಿ ಕುಡಿವ ನೀರಿನ ಪರಿಹಾರಕ್ಕಾಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಗ್ರಾಮಸ್ಥರ ನೀರಿನ ದಾಹ ನೀಗಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ ರು. 8 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ. ತಾಲೂಕಿಗೆ ರು. 30 ಕೋಟಿ ಪ್ರಸ್ತಾವನೆಯಲ್ಲಿ ರು. 16 ಕೋಟಿ ನೀಡಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಹುತಾತ್ಮ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು.