ಪ್ಲಾಸ್ಟಿಕ್ ಧ್ವಜ ಮಾರಾಟ ಸಂಪೂರ್ಣ ನಿಷೇಧ
ಗುಲ್ಬರ್ಗ: ಇಲ್ಲಿನ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 40 ಮೈಕ್ರಾನ್ಗಿಂತ ಕಡಿಮೆಯಿರುವ ಪ್ಲಾಸ್ಟಿಕ್ ಕೈಚೀಲಗಳನ್ನು ಉಪಯೋಗಿಸಿವುದು ಹಾಗೂ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಗುಲ್ಬರ್ಗ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯು ಆಗಿರುವ ಜಿಲ್ಲಾಧಿಕಾರಿ ಡಾ. ಎನ್.ವಿ. ಪ್ರಸಾದ ಅವರು ಆದೇಶ ಹೊರಡಿಸಿದ್ದಾರೆ.
ಜ. 26ರಂದು ಆಚರಿಸಲಾಗುವ ಗಣರಾಜ್ಯೋತ್ಸವದಂದು ನಗರ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಲ್ಪಟ್ಟ ರಾಷ್ಟ್ರೀಯ ಧ್ವಜಗಳು ಹಾಗೂ ಮಾರಾಟವನ್ನು ಸಹ ನಿಷೇಧಿಸಲಾಗಿದೆ. ಅಲ್ಲದೆ ಮಾರಾಟ ಮಾಡುವ ಹಾಗೂ ಉಪಯೋಗಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ.