ಇಂದಿನಿಂದ ವಿಧಾನಸೌಧದ ಎದುರು ಪ್ರತಿಭಟನೆ
ಗುಲ್ಬರ್ಗ: ರಾಜ್ಯ ಸರ್ಕಾರ ಕಬ್ಬು ಬೆಲೆ ನಿಗದಿಪಡಿಸಿ ಶಾಸನಬದ್ಧ ಆದೇಶ ಹೊರಡಿಸಿ ಎರಡು ತಿಂಗಳಾದರೂ ಯಾವುದೇ ಕಾರ್ಖಾನೆಗಳು ನಿಗದಿತ ದರ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಜ. 22 ರಿಂದ ಬೆಂಗಳೂರಿನ ವಿಧಾನಸೌಧದ ಎದುರು ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಮತ್ತು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ರೈತರಿಗೆ ನ್ಯಾಯ ಸಿಗುವವರೆಗೂ ಈ ಹೋರಾಟ ಮುಂದುವರೆಸಲಾಗುವುದು ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ ಗುಲ್ಬರ್ಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಗದೀಶ ಪಾಟೀಲ್ ರಾಪಜೂಪ ಹೇಳಿದ್ದಾರೆ.
ಕಬ್ಬು ಬೆಳೆಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ ನೇತೃತ್ವದ ಧರಣಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದಾರೆ. ಜ.22ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು. ಮಾಹಿತಿಗಾಗಿ 9916864767ಗೆ ಸಂಪರ್ಕಿಸಿ.