ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಪ್ರಜಾಪ್ರಭುತ್ವ ಪದ್ಧತಿಯಲ್ಲಿ ಮತದಾನಕ್ಕೆ ಮಹತ್ವ

Mainashree
Updated On : 26 Jan 2014, 12:34 pm

ಸೈದಾಪುರ:ಇಲ್ಲಿನ ಸೈದಾಪುರ ಉಪತಹಸೀಲ್ದಾರರ ಕಾರ್ಯಾಲಯದಲ್ಲಿ ಶನಿವಾರ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.
ಉಪತಹಸೀಲ್ದಾರರಾದ ಗೋಪಾಲ ಕಾಪೂರ ಮಾತನಾಡುತ್ತಾ, ಭಾರತ ಜಗತ್ತಿನಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ನಮ್ಮ ದೇಶದ ಅಭಿವೃದ್ಧಿ   ಮತದಾರರನ್ನು ಅವಲಂಬಿಸಿದೆ. ಪ್ರತಿಯೊಬ್ಬರು ಮತದಾನದ ಹಕ್ಕುನ್ನು ಪಡೆದುಕೊಳ್ಳಬೇಕು. ಚುನಾವಣೆಯ ಸಂದರ್ಭದಲ್ಲಿ ಅದನ್ನು ನ್ಯಾಯಯುತವಾಗಿ ಬಳಕೆ ಮಾಡಿಕೊಳ್ಳಬೇಕು. ಭವಿಷ್ಯದಲ್ಲಿ ಉತ್ತಮ ಅಭ್ಯರ್ಥಿಯ ಆಯ್ಕೆಗೆ ಮತದಾನ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ಇದನ್ನು ಇಂದಿನ ಯುವ ಜನಾಂಗ ಅರಿತುಕೊಳ್ಳಬೇಕು. ಭವ್ಯ ಭಾರತದ ಭವಿಷ್ಯ ರೂಪಿಸಬೇಕು.
   ಯಾವುದೇ ಜಾತಿ ಧರ್ಮ, ಜನಾಂಗ, ಭಾಷೆ, ಭಯದೊಂದಿಗೆ ಮತ ಚಲಾವಣೆ ಮಾಡದೆ ನಿರ್ಭೀತವಾಗಿ ಚುನಾವಣೆಯಲ್ಲಿ ಭಾಗವಹಿಸುತ್ತೇವೆಂದು ಪ್ರತಿಜ್ಞೆ ಮಾಡುವ ದಿನ ಇದಾಗಿದೆ ಎಂದು ಹೇಳಿದರು.
ಭಾರತ ಚುನಾವಣಾ ಆಯೋಗದ ಸಂಸ್ಥಾಪನಾ ದಿನವಾದ ಇಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ. ಮೊದಲ ಬಾರಿಗೆ ಮತದಾರರಾಗಿ ನೋಂದಾವಣೆಯಾಗಿರುವವರಿಗೆ ಅಂದು ಗುರುತಿನ ಕಾರ್ಡ್ ಅನ್ನು ಮತಗಟ್ಟೆಯಲ್ಲಿ ವಿತರಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement